ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಕೆ.ವಿ.ಪ್ರಭಾಕರ್‌ಗೆ ಅಭಿನಂದನೆ

varthajala
0 minute read
0

ಬೆಂಗಳೂರು: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಕನಸು ನನಸಾಗಲು ಕಾರಣಕರ್ತರಾದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂೃಜೆ) ಇದೇ 27ರಂದು ಮಂಗಳವಾರ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಿದೆ.

ನಗರದ ಕೆ.ಜಿ.ರಸ್ತೆ, ಕಂದಾಯಭವನದಲ್ಲಿ 3ನೇ ಮಹಡಿಯಲ್ಲಿರುವ ಕೆಯುಡಬ್ಲೂೃಜೆ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಅಭಿನಂದನಾ ಭಾಷಣ ಮಾಡಲಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ ನಿಂಬಾಳ್ಕರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ

.



Post a Comment

0Comments

Post a Comment (0)
Today | 10, January 2025