Ksou ಕೆಸ್‍ಒಯು: ಜನವರಿ ಆವೃತ್ತಿಯ ಪ್ರವೇಶಾತಿ ಪ್ರಾರಂಭ

varthajala
0

ಬೆಂಗಳೂರು, ಫೆಬ್ರವರಿ 01 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2023-24ನೇ ಜನವರಿ ಆವೃತ್ತಿ ಶೈಕ್ಷಣಿಕ ಸಾಲಿಗೆ ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸ್ನಾತಕ / ಸ್ನಾತಕೋತ್ತರ ಕೋರ್ಸ್‍ಗಳಾದ ಬಿ.ಎ / ಬಿ.ಕಾಂ / ಬಿ.ಬಿ.ಎ / ಬಿ.ಸಿ.ಎ / ಬಿ.ಎಸ್ಸಿ., ಎಂ.ಎ / ಎಂ.ಸಿ.ಜೆ / ಎಂ.ಕಾಂ., ಬಿ.ಎಲ್.ಐ.ಎಸ್ಸಿ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್ ಪ್ರೋಗ್ರಾಮ್ಸ್.,  ಡಿಪ್ಲೋಮಾ ಪ್ರೋಗ್ರಾಮ್ಸ್.,  ಸರ್ಟಿಫಿಕೇಟ್ ಪ್ರೋಗ್ರಾಮ್ಸ್‍ಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಬೆಂಗಳೂರು ಪ್ರಾದೇಶಿಕ ಕೇಂದ್ರ – 01 ರÀಲ್ಲಿ  ಜನವರಿ 9 ರಿಂದ ಪ್ರವೇಶಾತಿ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನವಾಗಿದೆ.

ಅರ್ಜಿಗಳನ್ನು ಅಧಿಕೃತ ಜಾಲತಾಣ www.ksoumysuru.ac.in  ನಲ್ಲಿ  ಅರ್ಜಿ ಸಲ್ಲಿಸಿ, ಪ್ರಾದೇಶಿಕ ಕೇಂದ್ರಕ್ಕೆ ದಾಖಲಾತಿಗಳೊಂದಿಗೆ ಭೇಟಿ ನೀಡಿ ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.
 
ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ಕಛೇರಿ ದೂರವಾಣಿ ಸಂಖ್ಯೆ 080-26603664 ಹಾಗೂ 9844965515 ನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕರಾದ ದಿಲೀಪ.ಡಿ ಅವರು ತಿಳಿಸಿದ್ದಾರೆ.

Post a Comment

0Comments

Post a Comment (0)