BAKERY TECHNOLOGY CERTIFICATE COURSE : ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್‍ಗೆ ಅರ್ಜಿ ಆಹ್ವಾನ

varthajala
0

ಬೆಂಗಳೂರು, ಮಾರ್ಚ್ 27 (ಕರ್ನಾಟಕ ವಾರ್ತೆ) : ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆ ವಿಸ್ತರಣಾ ನಿರ್ದೇಶನಾಲಯದ ವತಿಯಿಂದ "ಹದಿನಾಲ್ಕು ವಾರದ ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್"ಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ. ಪಾಸ್/ಫೇಲ್ ಆಗಿರಬೇಕು. ನಿಗಧಿತ ಅರ್ಜಿ ಫಾರಂಗಳನ್ನು ರೂಪಾಯಿ 10/- ಸಂದಾಯಿಸಿ, ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆ, ಕೃಷಿ ವಿಶ್ವ ವಿದ್ಯಾನಿಲಯ, ಜಿಕೆವಿಕೆ, ಬೆಂಗಳೂರು-560065, ಇಲ್ಲಿಂದ ಪಡೆದುಕೊಳ್ಳಬಹುದು ಹಾಗೂ ಭರ್ತಿಮಾಡಿದ ಅರ್ಜಿಯನ್ನು ಸಲ್ಲಿಸಲು ಏಪ್ರಿಲ್ 28 ಅಪರಾಹ್ನ 4.00 ಘಂಟೆಯೊಳಗೆ, ಸಂಯೋಜಕರು ಮತ್ತು ಮುಖ್ಯಸ್ಥರು, ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆ, ಕೃಷಿ ವಿಶ್ವವಿದ್ಯಾನಿಲಯ, ಜಿಕೆವಿಕೆ, ಬೆಂಗಳೂರು-560065 ಈ ವಿಳಾಸಕ್ಕೆ ತಲುಪಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಯೋಜಕರು ಮತ್ತು ಮುಖ್ಯಸ್ಥರು, ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆ, ಕೃಷಿ ವಿಶ್ವವಿದ್ಯಾನಿಲಯ, ಜಿಕೆವಿಕೆ, ಬೆಂಗಳೂರು-560065 ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 080-23513370 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
Tags

Post a Comment

0Comments

Post a Comment (0)