ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

varthajala
0

ಬೆಂಗಳೂರು, ಮಾರ್ಚ್ 15 (ಕರ್ನಾಟಕ ವಾರ್ತೆ):  2023-24ನೇ ಶೈಕ್ಷಣಿಕ ವರ್ಷಕ್ಕೆ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ, ಕೆ.ಆರ್ ವೃತ್ತ, ಬೆಂಗಳೂರು ಇಲ್ಲಿ Engineering Mathematics  (ತಾಂತ್ರಿಕೇತರ) ವಿಷಯಗಳನ್ನು ಬೋಧನೆ ಮಾಡಲು ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ, ಎಐಸಿಟಿಇ/ ಯುಜಿಸಿ ನಿಯಮಗಳಾನುಸಾರ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಹಾಗೂ ಸಂಬಂಧಿತ ಮಾಹಿತಿಗಳನ್ನು ವಿಶ್ವವಿದ್ಯಾಲಯದ ವೆಬ್‍ಸೈಟ್ www.uvce.ac.in ನಿಂದ ಡೌನ್‍ಲೋಡ್ ಮಾಡಿಕೊಂಡು, ಸಂಬಂಧಿತ ದಾಖಲೆಗಳ ಪ್ರತಿಗಳೊಂದಿಗೆ ಮಾರ್ಚ್ 28 ಸಂಜೆ 5 ಗಂಟೆಗಳೊಳಗೆ ಸಲ್ಲಿಸುವುದು. ನಿಗಧಿತ ದಿನಾಂಕದ ನಂತರ ಸ್ವೀಕರಿಸಲಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕುಲಸಚಿವರ ಕಛೇರಿ ಯುವಿಸಿಇ, ಕೆ.ಆರ್ ವೃತ್ತ, ಬೆಂಗಳೂರು-01 ರಲ್ಲಿ ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Post a Comment

0Comments

Post a Comment (0)