ಸಿರಾ : ಹೆಣ್ಣು ಮಗುವೊಂದು ಅಗ್ನಿ ಅವಘಡದಿಂದ ಗಾಯಗೊಂಡು ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ

varthajala
0

 ಸಿರಾ ತಾಲ್ಲೂಕಿನ ಶಾಲೆಯೊಂದರಲ್ಲಿ ಒಂದನೇ ತರಗತಿಯ ಹೆಣ್ಣು ಮಗುವೊಂದು ನಿನ್ನೆ ಅಗ್ನಿ ಅವಘಡದಿಂದ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಸದರಿ ಆಸ್ಪತ್ರೆಗೆ ಇಂದು ಭೇಟಿನೀಡಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಮಗುವಿನ ಪೋಷಕರಿಗೆ ಸಾಂತ್ವಾನ ತಿಳಿಸಿ ಮಗುವಿನ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು. 


ಗಾಯಗಳು ಗಂಭೀರವಾಗಿದ್ದು ಶೇ 60ರಷ್ಟು ಸುಟ್ಟಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ವರದಿ ನೀಡಿದರು. ಮಗುವಿಗೆ ಆದಷ್ಟು ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಸ್ಥಳದಲ್ಲಿ ಹಾಜರಿದ್ದ ವೈದ್ಯರಿಗೆ ಸೂಚಿಸಿದರು. 

ಶಾಲೆಗಳಲ್ಲಿ ಮಕ್ಕಳ ರಕ್ಷಣೆಗೆ ಸಂಬಂಧ ಎಷ್ಟೆಲ್ಲಾ ಸುತ್ತೂಲೆ ನೀಡಲಾಗಿದ್ದರೂ ಮಕ್ಕಳು ಹೀಗೆ ಅವಘಡಕ್ಕೆ ತುತ್ತಾಗುತ್ತಿರುವುದು ಆತಂಕಕಾರಿಯಾಗಿದೆ. ಈ ಪ್ರಕರಣದಲ್ಲಿ ಶಾಲೆಯ ಶಿಕ್ಷಕರ ನಿರ್ಲಕ್ಷ ಎದ್ದು ಕಾಣುತ್ತಿದ್ದು ಸದರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಆಯೋಗವು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆಯೆಂದು  ತಿಳಿಸಿದರು. ಅಲ್ಲದೆ ಈ ಘಟನೆಗೆ ಕಾರಣರಾದವರ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಪೊಲೀಸ್ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. 

ತುಮಕೂರು ಜಿಲ್ಲೆಯಲ್ಲಿ ಈ ರೀತಿಯ (2023 ಜೂನ್ ತಿಂಗಳಲ್ಲಿ ಸಿರಾ ತಾಲ್ಲೂಕು ತರೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಗುವೊಂದು ಸಾಂಬಾರ್ ಪಾತ್ರೆಗೆ ಬಿದ್ದು ಗಾಯಗೊಂಡ ಪ್ರಕರಣವನ್ನು ಇಲ್ಲಿ ಉಲ್ಲೇಖಿಸಬಹುದು) ಎರಡನೇ ಘಟನೆ ಇದಾಗಿದ್ದು ಶಿಕ್ಷಣ ಇಲಾಖೆ ಮಕ್ಕಳ ರಕ್ಷಣೆಯ ಬಗ್ಗೆ ಮತ್ತಷ್ಟು ಕಾಳಜಿಯಿಂದ ಕಾರ್ಯನಿರ್ವಹಿಸಬೇಕೆಂದು ಸದಸ್ಯರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಕರೆಮಾಡಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. 

ಸದರಿ ಘಟನೆಗೆ ಸಂಬಂಧಿಸಿದಂತೆ ಸ್ಥಳಭೇಟಿ ಮಾಡಿ ವರದಿ ನೀಡುವಂತೆ ತುಮಕೂರು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಸೂಚಿಸಿದ್ದು ವರದಿ ಬಂದ ನಂತರ ಮುಂದಿನ ಕ್ರಮಕ್ಕೆ ಶಿಪಾರಸ್ಸು ಮಾಡುವುದಾಗಿ ಆಯೋಗದ ಸದಸ್ಯರು ತಿಳಿಸಿದ್ದಾರೆ. 

Post a Comment

0Comments

Post a Comment (0)