ಬೆಂಗಳೂರು, ಏಪ್ರಿಲ್ 04 (ಕರ್ನಾಟಕ ವಾರ್ತೆ): ಸರ್ಕಾರದ ವತಿಯಿಂದ 2024-25ನೇ ಸಾಲಿನಲ್ಲಿ ಡಾ. ಬಾಬು ಜಗಜೀವನರಾಂ ರವರ 117ನೇ ಜನ್ಮದಿನಾಚರಣೆಯನ್ನು ಏಪ್ರಿಲ್ 05 ರಂದು ಬೆಳಿಗ್ಗೆ 10.00 ಗಂಟೆಗೆ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಡಾ. ಬಾಬು ಜಗಜೀವನರಾಂ ರವರ ಪ್ರತಿಮೆ ಬಳಿ ಮಾಲಾರ್ಪಣೆ ಮಾಡುವ ಮುಖಾಂತರ ಆಚರಿಸಲಾಗುತ್ತಿದೆ.
ಕಾರ್ಯಕ್ರಮವನ್ನು ಲೋಕಸಭಾ ಸಾರ್ವತ್ರಿಕ ಚುನಾವಣೆ – 2024ರ ಹಿನ್ನೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಆಚರಿಸಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಮಾಚ ಕಲ್ಯಾಣ ಇಲಾಖೆ ಸಚಿವರು ಮತ್ತು ಇತರೆ ಗಣ್ಯ ವ್ಯಕ್ತಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.