ಬೆಂಗಳೂರು, ಏಪ್ರಿಲ್ 22 (ಕರ್ನಾಟಕ ವಾರ್ತೆ):
ಏಪ್ರಿಲ್ 26 ರಂದು ಸಾರ್ವತ್ರಿಕ ಲೋಕಸಭಾ ಚುನಾವಣೆ – 2024ರ ಪ್ರಯುಕ್ತ ಸಾರ್ವತ್ರಿಕ ರಜೆ ಘೋಷಣೆ ಹಿನ್ನೆಲೆಯಲ್ಲಿ ಎಲ್ಲಾ ಮತದಾರರು ಚುನಾವಣೆಯ ದಿನದಂದು ತಮ್ಮ ಮತವನ್ನು ಚಲಾಯಿಸುವ ಸಂಬಂಧವಾಗಿ ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನವು ಸಾರ್ವಜನಿಕ ವೀಕ್ಷಣೆಗೆ ಲಭ್ಯವಿರುವುದಿಲ್ಲ.
ಏಪ್ರಿಲ್ 30 ರ ಮಂಗಳವಾರ ಬೇಸಿಗೆ ರಜಾ ಪ್ರಯುಕ್ತ ಶಾಲಾ ಕಾಲೇಜುಗಳಿಗೆ ರಜೆಯಿರುವುದರಿಂದ ಜನಸಾಮಾನ್ಯರು ಹಾಗೂ ಸ್ಥಳೀಯರಿಗೆ ಮೃಗಾಲಯವನ್ನು ವೀಕ್ಷಿಸಲು ಅನುಕೂಲವಾಗುವಂತೆ ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನವನ್ನು ಸಾರ್ವಜನಿಕರ ವೀಕ್ಷಣೆಗೆ ತೆರೆದಿರಲಾಗುವುದು ಎಂದು ಶ್ರೀ ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.