ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀ ಯುತ ಎಚ್ ಎಸ್ ರಾಘವೇಂದ್ರ ಶೆಟ್ಟಿ ಅವರ 49 ನೇ ಹುಟ್ಟು ಹಬ್ಬವನ್ನು ಅವರ ಸ್ವಗೃಹದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಹುಟ್ಟು ಹಬ್ಬದ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರು ಹಾಗೂ ಮಾಜಿ ಸಚಿವರಾದ ಕೆ ಗೋಪಾಲಯ್ಯ ರವರು ಪಾಲ್ಗೊಂಡು ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದರು.
ನಂತರ ಮಾತನಾಡಿದ ಕೆ, ಗೋಪಾಲಯ್ಯ ರವರು ರಾಘವೇಂದ್ರ ಶೆಟ್ಟಿ ಅವರು ಬಿಜೆಪಿ ಪಕ್ಷದ ಸಂಘಟನಾ ಚತುರರು,ಹಾಗೂ ಒಳ್ಳೆಯ ನಾಯಕತ್ವ ಗುಣ ಹೊಂದಿರುವ ಸ್ನೇಹ ಜೀವಿ, ಕ್ಷೇತ್ರದಲ್ಲಿ ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರ ವಿಶ್ವಾಸ ಗಳಿಸಿ ಎಲ್ಲರ ಮೆಚ್ಚುಗೆ ಗೆ ಪಾತ್ರರಾಗಿದ್ದಾರೆ . ಮುಂದೆ ಅವರ ರಾಜಕೀಯ ಹಾಗೂ ಸಾಮಾಜಿಕ ಕಾರ್ಯಗಳು ಹೀಗೆ ಮುಂದುವರೆಯಲಿ ಒಳ್ಳೆಯ ಸ್ಥಾನಮಾನ ಒಲಿದುಬರಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉತ್ತರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಎನ್ ಜಯರಾಂ, ಎಸ್ ಸಿ ಮೋರ್ಚಾ ಅಧ್ಯಕ್ಷ ರಾದ ಬಿ ನಾರಾಯಣ ಸ್ವಾಮಿ, ಬಿಜೆಪಿ ಮುಖಂಡರುಗಳಾದ ಎನ್ ವೆಂಕಟೇಶ್, ವೆಂಕಟೇಶ್ ಮೂರ್ತಿ, ರೇಣುಕಾ ಆರಾಧ್ಯ, ಆನಂದ್, ಭಾಸ್ಕರ್,ಸುರಭಿ ನಾಗರಾಜ್ ಸೇರಿದಂತೆ ಹಲವು ಗಣ್ಯರು ಕಾರ್ಯಕರ್ತರು ಉಪಸ್ಥಿತರಿದ್ದರು.