ಜಲಮಂಡಳಿಯಿಂದ ಪೋನ್- ಇನ್ –ಕಾರ್ಯಕ್ರಮ

varthajala
0

 ಬೆಂಗಳೂರು, ಏಪ್ರಿಲ್ 10 (ಕರ್ನಾಟಕ ವಾರ್ತೆ):

ಬೆಂಗಳೂರು ಜಲಮಂಡಳಿ ವತಿಯಿಂದ ಜಲಮಂಡಳಿ ಅಧ್ಯಕ್ಷರೊಂದಿಗೆ ಏಪ್ರಿಲ್ 12 ರಂದು ಬೆಳಿಗ್ಗೆ 9.30 ರಿಂದ 10.30 ಗಂಟೆಯವೆರೆಗೆ  ನೇರ ಪೋನ್ – ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಾರ್ವಜನಿಕರು ತಮ್ಮ ವಲಯ / ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳ ಚರಂಡಿ, ಕೊಳವೆ, ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ ಜಲಮಾಪನ ಹಾಗೂ ನೀರಿನ ಬಿಲ್ಲಿನಲ್ಲಿ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು – ಕೊರತೆಗಳನ್ನು ಬಗೆಹರಿಸಿಕೊಳ್ಳಲು ಈ ಪೋನ್ ಇನ್ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳುವುದು. ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್.ಆರ್. ಸಂಖ್ಯೆಯನ್ನು ತಿಳಿಸಿ ದೂರನ್ನು ನೀಡುವುದು. ಸಾರ್ವಜನಿಕರು ದೂರವಾಣಿ ಸಂಖ್ಯೆ 080-22945119 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.  

Post a Comment

0Comments

Post a Comment (0)