ಬೆಂಗಳೂರು, ಏಪ್ರಿಲ್ 28 (ಕರ್ನಾಟಕ ವಾರ್ತೆ): ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 2024-25 ನೇ ಸಾಲಿನ ಶೈಕ್ಷಣಿಕ ಅವಧಿಗೆ ಲ್ಯಾಟರಲ್ ಎಂಟ್ರಿ ಮುಖಾಂತರ 2ನೇ ವರ್ಷದ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ನೇರ ಪ್ರವೇಶಕ್ಕಾಗಿ 32 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.2,500/- ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಯಾ ಐ.ಐ.ಹೆಚ್.ಟಿ. ನಿಯಮಾನುಸಾರ ವಸತಿ ನಿಲಯದ ಸೌಲಭ್ಯವನ್ನು ಕಲ್ಪಿಸಲಾಗುವುದು. ಅಭ್ಯರ್ಥಿಗಳು ಗಣಿತ, ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರದೊಂದಿಗೆ 10+2 ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಯಾವುದೇ ಜವಳಿ ವಿಭಾಗದ ವೃತ್ತಿಪರ ವಿಭಾಗದಲ್ಲಿ 10+2 ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ 10ನೇ ತರಗತಿ ತೇರ್ಗಡೆ ಜೊತೆಗೆ (2 ವರ್ಷಗಳ ಐಟಿಐ) ತೇರ್ಗಡೆ ಹೊಂದಿರಬೇಕು. ಅಥವಾ 10+2 ಪಾಸ್ ಜೊತೆಗೆ (2 ವರ್ಷಗಳ ಐಟಿಐ) ತೇರ್ಗಡೆ ಎರಡನೇ ವರ್ಷದ ಡಿಪ್ಲೋಮಾ ಕೋರ್ಸ್‍ಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನಾಂಕವಾಗಿದೆ.
ಲ್ಯಾಟರಲ್ ಎಂಟ್ರಿ ಮುಖಾಂತರ ದ್ವಿತೀಯ ವರ್ಷದ ಡಿಪ್ಲೋಮಾ ಕೋರ್ಸ್ ನೇರ ಪ್ರವೇಶಕ್ಕೆ ಅರ್ಜಿ ಆಹ್ವಾನ
April 28, 2024
0
ಜವಳಿ ವಿಭಾಗದ ವೃತ್ತಿಪರ ಸ್ಟ್ರೀಮ್‍ನಲ್ಲಿ 10+2 ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಐ.ಐ.ಹೆಚ್.ಟಿ ನಡೆಸುವ ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರದಲ್ಲಿ ಬ್ರಿಡ್ಜ್ ಕೋರ್ಸ್‍ನ್ನು ಅಭ್ಯಾಸ ಮಾಡಬೇಕು. ವಯೋಮಿತಿ ದಿನಾಂಕ: 01-07-2024 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ 25 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ವಯೋಮಿತಿ 27 ವರ್ಷ. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೂಡೀಕೃತ ಅಂಕಗಳ ಮೆರಿಟ್‍ನ್ನು ಪರಿಗಣಿಸಲಾಗುವುದು.
ಲ್ಯಾಟರಲ್ ಎಂಟ್ರಿ ಮುಖಾಂತರ 2 ನೇ ವರ್ಷದ ಡಿಪ್ಲೋಮಾ ಕೋರ್ಸಗೆ ನೇರ ಪ್ರವೇಶಕ್ಕಾಗಿ ಲಭ್ಯವಿರುವ ಸಂಸ್ಥೆಗಳು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ) - 13 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು) – 14 ಅಭ್ಯರ್ಥಿಗಳು, ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ) – 03 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ) – 02 ಅಭ್ಯರ್ಥಿಗಳು ಸೇರಿ ಒಟ್ಟು 32 ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಿದೆ.
ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‍ಗಾಗಿ ಕರೆಯಲಾಗುವುದು. ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ ದೂರವಾಣಿ ಸಂ:08372-297221 ಹಾಗೂ ಮೊಬೈಲ್ ಸಂಖ್ಯೆ: 9449162822 ಅಥವಾ ಆಯಾ ಜಿಲ್ಲೆಯ ಜಂಟಿ/ಉಪ/ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಇವರನ್ನು ಸಂಪರ್ಕಿಸಿ ಪಡೆಯಬಹುದಾಗಿದೆ.
ಅರ್ಜಿಗಳನ್ನು ಆನ್‍ಲೈನ್‍ನಲ್ಲಿ https:// khtigadag.ac.in/ Lateralentryadmissionform.pdf ಲಿಂಕ್ ಮೂಲಕ ಡೌನ್‍ಲೊಡ್ ಮಾಡಿಕೊಳ್ಳಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ “ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-582102” ಇವರಿಗೆ ಸಲ್ಲಿಸಬೇಕು ಎಂದು ಕೈಮಗ್ಗ ಮತ್ತು ಜವಳಿ ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.