ಬೆಂಗಳೂರು: ಮಕ್ಕಳಿಗೆ ಕಥೆಗಳನ್ನು ಹೇಳುವ ಮೂಲಕ ಶಿಕ್ಷಣ, ಕಲೆ, ಸಾಹಿತ್ಯದ ಕಲಿಕೆಯನ್ನು ಪೋಷಕರು ಪ್ರೋತ್ಸಾಹಿಸಬೇಕು ಎಂದು ಪದ್ಮಭೂಷಣ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಹೇಳಿದ್ದಾರೆ.
ಬೆಂಗಳೂರಿನ ಯಲಹಂಕದಲ್ಲಿರುವ ದಿವ್ಯಜ್ಯೋತಿ ವಿದ್ಯಾ ಕೇಂದ್ರದ ವತಿಯಿಂದ ಬಾಲ್ಯದಲ್ಲಿ ಆರೈಕೆ ಮತ್ತು ಶಿಕ್ಷಣ ʼಇದಿತ್ರಿʼ ಮತ್ತು ಠಾಗೂರ್ ಸಾಂಸ್ಕೃತಿಕ ಅಕಾಡೆಮಿ ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಕರ್ನಾಟಕ ರಾಜ್ಯ ಡಾ: ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ನಾಗೇಶ್ ವಿ. ಬೆಟ್ಟಕೋಟೆ, ಕೆ.ಪಿ.ಎಸ್.ಸಿ ಮಾಜಿ ಅಧ್ಯಕ್ಷರಾದ ಶ್ರೀ ಗೋನಾಳ್ ಭೀಮಪ್ಪ, ರಾಮಯ್ಯ ಮೆಮೋರಿಯಲ್ ಆಸ್ಪತ್ರೆಯ ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ.ಸೋಮಶೇಖರ ಎ.ಆರ್., ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರುPost a Comment
0Comments