ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

varthajala
0

 ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇಬ್ಬರು ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಸುರ್ಯೋದಯ ಪತ್ರಿಕೆ ಸಂಪಾದಕರಾಗಿಯೂ ಕೆಲಸ ಮಾಡಿದ್ದರು. ಅವರ ಹುಟ್ಟೂರಾದ ಕೋಲಾರ ಜಿಲ್ಲೆ ಚೌಡದೇವನಹಳ್ಳಿಯಲ್ಲಿ ಸಂಜೆ ಅಂತ್ಯಸಂಸ್ಕಾರ ನಡೆಯಿತು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಕೆಯುಡಬ್ಲೂಜೆ ಸಂತಾಪ:
ಹಿರಿಯ ಪತ್ರಕರ್ತರದ ಅರ್ಜುನ್ ದೇವ್‌ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಪ್ರಜಾವಾಣಿ, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಯಲ್ಲಿ ಸಲ್ಲಿಸಿದ್ದ ಸೇವೆ ಅನನ್ಯವಾದದ್ದು. ಪತ್ರಕರ್ತರ ಸಂಘಟನೆಯಲ್ಲಿ ಅವರಿಗಿದ್ದ ಬದ್ಧತೆ, ಸಮಾಜಮುಖಿಯಾಗಿ ತೊಡಗಿಸಿಕೊಳ್ಳುವ ಪರಿ ನಿಜಕ್ಕೂ ಶ್ಲಾಘನೀಯ.
ಸಂಘದ ಅಧ್ಯಕ್ಷರಾಗಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದ ಅರ್ಜುನ್ ದೇವ್ ಅವರ ನಿಧನದಿಂದ ಸುದ್ದಿಮನೆಗೆ ತುಂಬಲಾರದ ನಷ್ಟವಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಶೋಕಿಸಿದ್ದಾರೆ. 

ಎನ್.ಅರ್ಜುನದೇವ ಅವರಿಗೆ ಕೆಯುಡಬ್ಲ್ಯೂಜೆ ಶ್ರದ್ಧಾಂಜಲಿ ಸಭೆ

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ (1971-74), ಎರಡು ಅವಧಿಗೆ ಅಧ್ಯಕ್ಷರಾಗಿ (1979-81 &1991-93) ಸೇವೆ ಸಲ್ಲಿಸಿದ್ದ ಎನ್.ಅರ್ಜುನ್ ದೇವ್ ಅವರು ನಮ್ಮನ್ನು ಅಗಲಿದ್ದಾರೆ.
ಎನ್.ಅರ್ಜುನದೇವ ಅವರಿಗೆ ದಿನಾಂಕ 25-4-2024 ರಂದು ಗುರುವಾರ ಬೆಳಿಗ್ಗೆ 11.30ಕ್ಕೆ ಕೆಯುಡಬ್ಲೂಜೆ ಸಭಾಂಗಣದಲ್ಲಿ (ಕಂದಾಯ ಭವನ 3 ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು-18)
ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿದೆ.



Post a Comment

0Comments

Post a Comment (0)