ಎಸ್.ಎಸ್.ಎಲ್.ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಿಸಲು ಅವಕಾಶ

varthajala
0

ಬೆಂಗಳೂರು, ಮೇ 30 (ಕರ್ನಾಟಕ ವಾರ್ತೆ): ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಜೂನ್ 7 ರಿಂದ 14 ರವರೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ್ಷೆ-2 ನಡೆಯಲಿದ್ದು, ಪರೀಕ್ಷೆಯು ಬೇರೆ ಬೇರೆ ಪರೀಕ್ಷಾ ಕೇಂದ್ರಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ದಿನಾಂಕ ಜೂನ್ 7 ರಿಂದ 14 ರವರೆಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆ-02 ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಮಾರ್ಗಗಳನ್ನು, ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಲಾಗುವುದು. ಹೆಚ್ಚುವರಿ ಸುತ್ತುವಳಿಗಳ ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡಲಾಗುವುದು.


ಪರೀಕ್ಷಾ ಕೇಂದ್ರಗಳ ಬಳಿ ಕೋರಿಕೆ ನಿಲುಗಡೆ ಕೋರಿದಲ್ಲಿ, ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)