ಕೋಟ್ಯಾಂತರ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ‘ರಾಮನ ಅವತಾರ’ ಚಲನಚಿತ್ರ ನಿಷೇಧಿಸಲು ಆಗ್ರಹ

varthajala
0

 ಬೆಂಗಳೂರು : ವಿನಯ ಪಂಪಾಪತಿ ಮತ್ತು ವಿಕಾಸ ಪಂಪಾಪತಿ ನಿರ್ದೇಶನದ ಹಾಗೂ ಅಮ್ರೆಜ್ ಸೂರ್ಯವಂಶಿ ನಿರ್ಮಾಣದ ‘ರಾಮನ ಅವತಾರ’ ಎಂಬ ಕನ್ನಡ ಚಲನಚಿತ್ರ ಮೇ 10 ಕ್ಕೆ ಬಿಡುಗಡೆಗೊಳ್ಳಲಿದ್ದು ಅದರ ಟೀಸರ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ, ಅದರಲ್ಲಿ ಕೋಟ್ಯಾಂತರ ಹಿಂದೂಗಳು ಅತ್ಯಂತ ಭಕ್ತಿಯಿಂದ ಪೂಜಿಸುವ ಪ್ರಭು ಶ್ರೀ ರಾಮಚಂದ್ರ ಮತ್ತು ರಾಮಾಯಣ ಧರ್ಮಗ್ರಂಥದ ಅಪಮಾನ ಮಾಡಲಾಗಿದೆ. ಆದ್ದರಿಂದ ಸಿನಿಮಾದ ಹೆಸರನ್ನು ಬದಲಾಯಿಸಬೇಕು ಮತ್ತು ಅದರಲ್ಲಿನ ರಾಮಾಯಣದ ಅಪಮಾನಾತ್ಮಕ ಸನ್ನಿವೇಶಗಳನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಶರತ್ ಕುಮಾರ್ ಇವರು ಕರ್ನಾಟಕ ಚಲನಚಿತ್ರ ಮಂಡಳಿ ಅಧ್ಯಕ್ಷರಾದ ಎನ್. ಎಮ್ ಸುರೇಶ್ ಇವರಿಗೆ ಮನವಿ ನೀಡಿದ್ದಾರೆ, ಈ ವೇಳೆ ಹಿಂದೂ ಜನಜಾಗೃತಿ ಸಮಿತಿಯ ಶ್ರೀ ನೀಲೇಶ್ವರ, ಶ್ರೀ. ನಿರಂಜನ ನಾರಾಯಣಕರ, ಶ್ರೀ. ಪ್ರಶಾಂತ್ ದಾಸರಹಳ್ಳಿ, ರಾಷ್ಟ್ರೀಯ ಹಿಂದೂ ಪರಿಷತ್ ನ ರಾಜ್ಯಾಧ್ಯಕ್ಷರಾದ ಶ್ರೀ. ಸುರೇಶ್ ಗೌಡ, ನಗರ ಜಿಲ್ಲಾಧ್ಯಕ್ಷರಾದ ಶ್ರೀ ವಿಕ್ರಂ ಶೆಟ್ಟಿ ಇವರು ಉಪಸ್ಥಿತರಿದ್ದರು.

(ಪ್ರಭು ಶ್ರೀ ರಾಮನಂತೆ ವೇಷ ಧರಿಸಿ ಅಪಮಾನ !)
ಚಿತ್ರದ ಟ್ರೈಲರ್ ನಲ್ಲಿ 'ರಾಮ' ಹೆಸರಿನ ಚಿತ್ರದ ನಾಯಕ ‘ಯಾವ ಊರಿನ ಜನ ನನ್ನನ್ನು ಊರಿಂದ ಹೊರಗೆ ತಳ್ಳಿದರೋ ಅದೇ ಜನ ನನಗೆ ಗೌರವ ಕೊಡುವ ತನಕ ನಾನು ಇಲ್ಲೇ ಎಲ್ಲದರೂ ರಸ್ತೆಯಲ್ಲಿ ಕಾಲ ಕಳೆಯುತ್ತೇನೆ’ ಎನ್ನುತ್ತಾನೆ, ಇದು ರಾಮಾಯಣ ಧರ್ಮಗ್ರಂಥಕ್ಕೆ ಮಾಡಿದ ಘೋರ ಅಪಮಾನವಾಗಿದೆ. ಚಿತ್ರನಟ ‘ರಾಮನ’ ಹೆಸರಿನಲ್ಲಿ ಚುನಾವಣೆಗೆ ನಿಂತಿರುತ್ತಾನೆ, ಅಲ್ಲಿ ‘ಯಾರ ಮನೆ ಮುಂದೆ ಕಸ ಇದ್ದರೆ ರಾಮನಿಗೆ ಕಾಲ್ ಮಾಡಿ’ ಎಂದು ಕರೆ ನೀಡಲಾಗುತ್ತದೆ. ಇನ್ನು ಚಿತ್ರ ನಾಯಕಿ ರಾಮಾಯಣದಂತೆ ರಾಮನನನ್ನು ಜಿಂಕೆಯ ಚಿತ್ರವಿರುವ ಕಾರಿನ ಹಿಂದೆ ಓಡಿಸಿ ನಂತರ ಅವಳನ್ನು ಕಿಡ್ನಾಪ್ ಮಾಡುತ್ತಿರುವಂತೆ ತೋರಿಸಲಾಗಿದೆ. ಅಷ್ಟೇ ಅಲ್ಲದೆ ರಾಮನ ವೇಷದಲ್ಲಿ ಚಿತ್ರದ ನಾಯಕ ಖಳನಾಯಕರೊಂದಿಗೆ ಫೈಟಿಂಗ್ ಮಾಡುತ್ತಿರುವಂತೆ ತೋರಿಸಲಾಗಿದೆ.
(ರಾಮನನ್ನು ಪೊಲೀಸರು ಓಡಿಸಿಕೊಂಡು ಹೋಗುತ್ತಿರುವ ದೃಶ್ಯ !)
ಶ್ರೀ. ಶರತ್ ಕುಮಾರ್ ಮಾತನಾಡಿ ಇಂದು ಕೇವಲ ಭಾರತ ಸೇರಿ ವಿಶ್ವಾದ್ಯಂತ ಪ್ರಭು ಶ್ರೀರಾಮನನ್ನು ಪೂಜಿಸಲಾಗುತ್ತಿದೆ. ಪ್ರಭು ಶ್ರೀರಾಮನಿಗಾಗಿ ಸಾವಿರಾರು ಹಿಂದೂಗಳು ತಮ್ಮ ಪ್ರಾಣತ್ಯಾಗ ಮಾಡಿ ಭವ್ಯ ರಾಮಮಂದಿರ ಕಟ್ಟಿದ್ದಾರೆ. ಹೀಗಿರುವಾಗ ಈ ಚಿತ್ರದಲ್ಲಿ ಶ್ರೀರಾಮನ ವೇಷವನ್ನು ನಾಯಕನಿಗೆ ತೊಡಿಸಿ ಪೊಲೀಸರು ಶ್ರೀರಾಮನನ್ನು ಅಟ್ಟಾಡಿಸುವಂತೆ ತೋರಿಸಲಾಗಿದೆ. ಕಾಮಿಡಿ ಚಿತ್ರ ಮಾಡುವ ಗೀಳಿನಲ್ಲಿ ಪವಿತ್ರ ರಾಮಾಯಣ ಮತ್ತು ಪ್ರಭು ಶ್ರೀರಾಮನ ಘೋರ ಅಪಮಾನ ಮಾಡಿರುವುದು ಕಂಡುಬರುತ್ತದೆ, ಈ ಹಿಂದೆ ಇದೇ ಕಾರಣಕ್ಕೆ ಈ ಚಲನಚಿತ್ರ ಬಿಡುಗಡೆಯಾಗಲು ವಿರೋಧ ವ್ಯಕ್ತವಾಗಿತ್ತು, ಆದರೆ ಚಿತ್ರದಲ್ಲಿ ಬದಲಾವಣೆಗಳನ್ನು ಮಾಡಿರುವಂತೆ ಕಂಡರೂ ಚಿತ್ರದ ಹೆಸರು ಮತ್ತು ಅದರಲ್ಲಿನ ತುಣಕುಗಳಲ್ಲಿ ಇನ್ನೂ ರಾಮನ ಅಪಮಾನ ಎದ್ದು ಕಾಣಿಸುತ್ತಿದೆ, ಕಾಮಿಡಿ ಚಿತ್ರ ರಚಿಸುವ ಉದ್ದೇಶವಿದ್ದಿದ್ದರೆ ‘ರಾಮನ ಅವತಾರ’ವೆಂದೇ ಏಕೆ ಹೆಸರಿಡಬೇಕಿತ್ತು ಇತರ ಪಂಥೀಯರ ಶ್ರದ್ಧಾಸ್ಥಾನಗಳ ಮೇಲೆ ಈ ರೀತಿಯ ಕಾಮಿಡಿ ಚಿತ್ರ ರಚಿಸುವ ಧೈರ್ಯ ತೋರುವರೆ  ಕೀಳುಮಟ್ಟದ ಸಿನಿಮಾ ಪ್ರಚಾರಕ್ಕಾಗಿ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡಲಾಗಿದೆ. ಇದು ಭಾರತೀಯ ದಂಡ ಸಂಹಿತೆ 295, 298 ಮತ್ತು 295 A ಪ್ರಕಾರ ಗಂಭೀರ ಅಪರಾಧವಾಗಿದೆ. ಅದಲ್ಲದೇ ಸಿನಿಮಾಟೋಗ್ರಾಫ್ ಆಕ್ಟ್ 1952 ನ ಕಲಂ 5 B ಪ್ರಕಾರ ಇದು ಸೆನ್ಸಾರ್ ಮಂಡಳಿ ನಿಯಮದ ಉಲ್ಲಂಘನೆಯಾಗಿದೆ. ದೇಶದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ಸಿನಿಮಾ ಮಾಡಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವುದು ನೀತಿ ಸಂಹಿತೆ ಉಲ್ಲಂಘನೆ ಆಗಿದೆ, ಈ ಚಿತ್ರದ ಸೆನ್ಸಾರ್ ಪ್ರಮಾಣ ಪತ್ರ ರದ್ದುಗೊಳಿಸದಿದ್ದರೆ ರಾಜ್ಯಾದ್ಯಂತ ಆಂದೋಲನ ನಡೆಸಲಾಗುವುದು ಎಂದರು.
(ಕರ್ನಾಟಕ ಚಲನಚಿತ್ರ ಮಂಡಳಿಯ ಎನ್ ಎಮ್ ಸುರೇಶ್ ಇವರಿಗೆ ಮನವಿ ನೀಡುತ್ತಿರುವ ಹಿಂದೂ ಜನಜಾಗೃತಿ ಸಮಿತಿ ಮತ್ತು ರಾಷ್ಟ್ರೀಯ ಹಿಂದೂ ಪರಿಷತ್ ನ ಕಾರ್ಯಕರ್ತರು)
ಈ ಮನವಿಯಲ್ಲಿ ಪ್ರಭು ಶ್ರೀರಾಮನ ಹೆಸರಿನ ಮತ್ತು ರಾಮಾಯಣದ ಸನ್ನಿವೇಶಗಳಿರುವ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ದೃಶ್ಯಗಳನ್ನು ಚಿತ್ರದಿಂದ ತೆಗೆಯಬೇಕು ಮತ್ತು ‘ರಾಮನ ಅವತಾರ’ ಎಂದರೆ ಜನರಿಗೆ ಇದು ತ್ರೇತಾಯುಗದ ಪ್ರಭು ಶ್ರೀರಾಮನದ್ದೇ ಕಥೆಯೆಂದೆನಿಸುತ್ತದೆ, ಆದರೆ ವಾಸ್ತವದಲ್ಲಿ ಇದು ಕಾಮಿಡಿ ಚಲನಚಿತ್ರವಾಗಿರುವುದರಿಂದ ಚಿತ್ರದ ಹೆಸರು ಬದಲಿಸಬೇಕು ಎಂದು ಆಗ್ರಹಿಸಲಾಗಿದೆ.

ತಮ್ಮ ಸವಿನಯ,

ಶ್ರೀ. ಮೋಹನ ಗೌಡ,
ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
(ಸಂಪರ್ಕ : 7204082609)

Post a Comment

0Comments

Post a Comment (0)