ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

varthajala
0

 ಬೆಂಗಳೂರು  (ಕರ್ನಾಟಕ ವಾರ್ತೆ) :

ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಾಂಖ್ಯಿಕ ನಿರೀಕ್ಷಕರ 105 (ಉ.ಮೂ.ವೃಂದ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಮೇ 21 ರಂದು ಆಯೋಗದ ಅಂತರ್ಜಾಲ http://kpsc.kar.nic.in  ನಲ್ಲಿ ಪ್ರಕಟಿಸಲಾಗಿದೆ.
ತಾತ್ಕಾಲಿಕ ಆಯ್ಕೆಪಟ್ಟಿಗೆ ಸಂಬಂಧಿಸಿದಂತೆ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ, ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದ ದಿನಾಂಕದಿಂದ 07 ದಿನಗಳ ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕ ಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-01 ಇವರಿಗೆ ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಬಹುದಾಗಿರುತ್ತದೆ. 07 ದಿನಗಳ ನಂತರ ಸಲ್ಲಿಸುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲವೆಂದು ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)