ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ

varthajala
0
ಬೆಂಗಳೂರು, ಮೇ 29 (ಕರ್ನಾಟಕ ವಾರ್ತೆ):
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಜೂನ್ 7 ರಿಂದ 14 ರವರೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ್ಷೆ-2 ನಡೆಯಲಿದ್ದು, ಪರೀಕ್ಷೆಯು ಬೇರೆ ಬೇರೆ ಪರೀಕ್ಷಾ ಕೇಂದ್ರಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ದಿನಾಂಕ ಜೂನ್ 7 ರಿಂದ 14 ರವರೆಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಎಸ್.ಎಸ್.ಎಲ್.ಸಿ ಪರೀಕ್ಷೆ-02 ರ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಮಾರ್ಗಗಳನ್ನು, ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಲಾಗುವುದು. ಹೆಚ್ಚುವರಿ ಸುತ್ತುವಳಿಗಳ ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡಲಾಗುವುದು.
ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ಪೆÇೀಷಕರು ಕೋರಿಕೆ ನಿಲುಗಡೆ ಕೋರಿದಲ್ಲಿ, ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಲಾಗಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)