ಬೆಂಗಳೂರು, ಮೇ 29 (ಕರ್ನಾಟಕ ವಾರ್ತೆ): ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸರ್ಕಾರದ ನಿರ್ದೇಶನದಂತೆ ಉಚಿತ/ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಿತರಣೆ ಮಾಡುತ್ತಿದೆ. 2024-25 ನೇ ಸಾಲಿನ ವಿದ್ಯಾರ್ಥಿ ಪಾಸಿಗಾಗಿ ಮೇ 29 ರಿಂದ ಆನ್‍ಲೈನ್ ಮೂಲಕ ಅರ್ಜಿ ಸ್ವೀಕರಿಸಿ, ಜೂನ್ 1 ರಿಂದ ವಿದ್ಯಾರ್ಥಿ ಪಾಸುಗಳನ್ನು ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿತರಣೆ ಮಾಡಲಾಗುವುದು.
2024-25ನೇ ಸಾಲಿನ ವಿದ್ಯಾರ್ಥಿ ರಿಯಾಯಿತಿ ಪಾಸಿನ ಆನ್‍ಲೈನ್ ಅರ್ಜಿಯು ಸೇವಾಸಿಂಧು ಪೆÇೀರ್ಟಲ್ https://sevasindhu.karnataka.ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದ ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದ್ದು, ಅದರಂತೆ ಕರ್ನಾಟಕ ರಾಜ್ಯದ ವಿದ್ಯಾರ್ಥಿನಿಯರು ಉಚಿತ ಪ್ರಯಾಣ ಸೌಲಭ್ಯ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ – 08022483777 ಗೆ ಸಂಪರ್ಕಿಸಬಹುದಾಗಿದೆ ಹಾಗೂ ಸಂಸ್ಥೆಯ ಜಾಲತಾಣದ ಮೂಲಕ ಮಾಹಿತಿ ಪಡೆಯಬಹುದಾಗಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.