`ಕನ್ನಡ ಚಳುವಳಿ ವೀರ ಸೇನಾನಿ ಮ.ರಾಮಮೂರ್ತಿ ಪ್ರಶಸ್ತಿಗೆ ಜೆ.ಹುಚ್ಚಪ್ಪ ಆಯ್ಕೆ

varthajala
0

 ಬೆಂಗಳೂರು: 2024ರ ಕನ್ನಡ ಸಾಹಿತ್ಯ ಪರಿಷತ್ತಿನ ‘ಕನ್ನಡ ವೀರ ಸೇನಾನಿ ಮ.ರಾಮಮೂರ್ತಿ ಪ್ರಶಸ್ತಿಗೆ ಹಿರಿಯ ಕನ್ನಡ ಹೋರಾಟಗಾರ ಮ.ರಾಮ ಮೂರ್ತಿ ಆಯ್ಕೆಯಾಗಿದ್ದಾರೆ ಕನ್ನಡ ನಾಡು, ನುಡಿ, ಜಲ, ಸಂಸ್ಕೃತಿಗಳ ರಕ್ಷಣೆಗೆ ಹಾಗೂ ಪ್ರಗತಿಗೆ ಶ್ರಮಿಸುತ್ತಿರುವವರನ್ನು ಗುರುತಿಸಬೇಕು ಎನ್ನುವುದು ಈ ದತ್ತಿಯ ಆಶಯವಾಗಿದೆ.

ಕೌನ್ಸಿಲರ್ ಆಗಿ, ಮೇಯರ್ ಆಗಿ ಕೂಡ ಸೇವೆ ಸಲ್ಲಿಸಿರುವ ಜೆ.ಹುಚ್ಚಪ್ಪನವರು ಕನ್ನಡಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದವರು. ಹಲವು ಪ್ರಮುಖ ಕನ್ನಡ ಕಾರ್ಯಕ್ರಮಗಳನ್ನು ಆಯೋಜಿಸಿರುವ ಅವರು ಕನ್ನಡಪರ ಸಾಧಕರನ್ನು ಗುರುತಿಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜನೆಯಲ್ಲಿಯೂ ತಮ್ಮನ್ನು ತೊಡಗಿಸಿ ಕೊಂಡಿದ್ದರು ನಾಡು-ನುಡಿಯ ವಿಚಾರಗಳ ಹೋರಾಟಗಳಲ್ಲಿ ಸದಾ ಮುಂದಾಳತ್ವ ವಹಿಸುವ ಅವರು ಸಾಮಾಜಿಕ ಚಳುವಳಿಗಳಲ್ಲಿ ಕೂಡ ತಮ್ಮನ್ನು ತೊಡಗಿಸಿ ಕೊಂಡವರು. 

ನಾಡೋಜ ಡಾ.ಮಹೇಶ ಜೋಶಿಯವರ ಅಧ್ಯಕ್ಷತೆಯಲ್ಲಿ ನಡೆದ ಪ್ರಶಸ್ತಿಯ ಆಯ್ಕೆ ಸಮಿತಿ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ಡಾ.ಪದ್ಮಿನಿ ನಾಗರಾಜು, ನೇ.ಭ.ರಾಮಲಿಂಗ ಶೆಟ್ಟಿ ಮತ್ತು ದತ್ತಿದಾನಿಗಳ ಪರವಾಗಿ ಟಿ.ತಿಮ್ಮೇಶ್ ಅವರುಭಾಗವಹಿಸಿದ್ದರು. ದತ್ತಿ ಪ್ರಶಸ್ತಿ ಪುರಸ್ಕೃತರಾದ ಜೆ.ಹುಚ್ಚಪ್ಪ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ವಿಶೇಷವಾಗಿ ಅಭಿನಂದಿಸುತ್ತದೆ ಮತ್ತು ಇದು ಇನ್ನಷ್ಟು ನಾಡು-ನುಡಿಪರ ಪರ ಹೋರಾಟಕ್ಕೆ ಪ್ರೇರಣೆಯಾಗಲಿ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ತಿಳಿಸಿದ್ದಾರೆ.

 ಎನ್.ಎಸ್.ಶ್ರೀಧರ ಮೂರ್ತಿ ಸಂಚಾಲಕರು, ಪ್ರಕಟಣಾ ವಿಭಾಗ

Post a Comment

0Comments

Post a Comment (0)