ಬೆಂಗಳೂರು, ಮೇ 09 (ಕರ್ನಾಟಕ ವಾರ್ತೆ) : ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು "The Role of ICT in Agricultural & Allied Sectors" ವಿಷಯದ ಮೇಲೆ ಮೇ 15 ರಿಂದ 24 ರವರೆಗೆ ಹತ್ತು ದಿನಗಳ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಈ ಕಾರ್ಯಾಗಾರದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ವಿಜ್ಞಾನಿಗಳು ವಿಷಯಾಧಾರಿತ ಉಪನ್ಯಾಸಗಳನ್ನು ನೀಡಲಿದ್ದು, ರಾಜ್ಯದ ವಿವಿಧ ಕೃಷಿ, ತೋಟಗಾರಿಕೆ, ಪಶುವೈದ್ಯಕೀಯ ಹಾಗೂ ಮೀನುಗಾರಿಕಾ ವಿಶ್ವÀವಿದ್ಯಾನಿಲಯದ ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಮತ್ತು ಕೃಷಿ, ತೋಟಗಾರಿಕೆ, ಪಶುವೈದ್ಯಕೀಯ ಹಾಗೂ ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಮೇ 13 ರೊಳಗಾಗಿ ನೋಂದಣಿ ಲಿಂಕ್: https://forms.gle/ಹೆಚ್ಚಿನ ವಿವರಗಳಿಗೆ ಕಾರ್ಯಕ್ರಮ ಸಂಯೋಜಕರು ಮೊ: 9743084194 ಅಥವಾ ಅಕಾಡೆಮಿಯ ವೆಬ್‍ಸೈಟ್ - www.kstacademy.in ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎ.ಎಂ. ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.