ಬೆಂಗಳೂರು: ಇಂಧನ ಇಲಾಖೆಯ ವಿದ್ಯುತ್ ಪರಿವೀಕ್ಷಣಾಲಯದ ವತಿಯಿಂದ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ-2024 ರ ಕಾರ್ಯಕ್ರಮವನ್ನು ಜೂನ್ 26 ರಿಂದ ಜುಲೈ 2ರವರೆಗೆ ರಾಜ್ಯಾದ್ಯಂತ ಆಚರಿಸಲಾಗುತ್ತಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಜೂನ್ 26 ರಂದು ಬೆಳಿಗ್ಗೆ 8ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರು ನೆರವೇರಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳಾದ ಗೌರವ್‍ಗುಪ್ತಾ ಸರ್ಕಾರದ ಮುಖ್ಯ ವಿದ್ಯುತ್ ಪರಿವೀಕ್ಷಕರಾದ ತೀತಿರಾ ಎನ್. ಅಪ್ಪಚ್ಚು ಅವರು ಸೇರಿದಂತೆ ಮತ್ತಿತರರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.