ಬೆಂಗಳೂರು, ಜೂನ್ 12 (ಕರ್ನಾಟಕ ವಾರ್ತೆ): ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿರುವ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ – 1122 ಕಿರಿಯ ಸಹಾಯಕರು / ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ದಿನಾಂಕ: 09-01-2023 ಹಾಗೂ ಪರಿಷ್ಕøತ ಅಂತಿಮ ಆಯ್ಕೆಪಟ್ಟಿಯನ್ನು ದಿನಾಂಕ: 14-03-2023 ಮತ್ತು ಹೆಚ್ಚುವರಿ ಆಯ್ಕೆಪಟ್ಟಿಯನ್ನು ದಿನಾಂಕ: 05-05-2023 ರಂದು ಪ್ರಕಟಿಸಲಾಗಿರುತ್ತದೆ.
ಪ್ರಸ್ತುತ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಗಾಗಿ 16 ಇಲಾಖೆಗಳಿಂದ ಸ್ವೀಕೃತವಾದ ಪ್ರಸ್ತಾವನೆಯ ಕಾಲನುಕ್ರಮದನುಸಾರ 79 ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಹಾಗೂ ಕಟ್ ಆಪ್ ಅಂಕಗಳ ಪಟ್ಟಿಯನ್ನು ಆಯೋಗದ ಜಾಲತಾಣ http://kpsc.kar.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.