ಕಲ್ಯಾಣ‌ ಮಂಡಳಿಯಲ್ಲಿನ ಭ್ರಷ್ಟಾಚಾರ ಹಾಗೂ ಕಾರ್ಮಿಕ ಹಕ್ಕುಗಳ ರಕ್ಷಣೆಗಾಗಿ ಮುಂದಿನ ಹೋರಾಟಕ್ಕೆ ಸಿದ್ದತೆ

varthajala
0

 ಹೈಕೋರ್ಟ್ ‌ಮಧ್ಯಂತರ ಆದೇಶದನ್ವಯ  ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯುಕಟ್ಟಡ ನಿರ್ಮಾಣ ಕಾರ್ಮಿಕರ ಇಬ್ಬರು ಮಕ್ಕಳಿಗೆ ದಂಡಸಹಿತ ಶೈಕ್ಷಣಿಕ ಧನಸಹಾಯ ಪಾವತಿಸಿರುವ ಕ್ರಮವನ್ನು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (ಸಿಐಟಿಯುಸ್ವಾಗತಿಸಿದೆಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (ಸಿಐಟಿಯುಮತ್ತು ಇತರೆ ನಾಲ್ಕು ಜನರು  ಹೈಕೋರ್ಟ್ ನಲ್ಲಿ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಯನ್ನು ಏಪ್ರಿಲ್ 23 ರಂದು ನಡೆಸಿದ್ದ‌‌ ನ್ಯಾಯಮೂರ್ತಿ ‌ಶ್ರೀ ನಾಗಪ್ರಸನ್ನ ಅವರ ಏಕಸದಸ್ಯ ಪೀಠ   ಎಲ್.ಎಲ್.ಬಿ ಹಾಗೂ ಎಂ.ಬಿ. ಓದುತ್ತಿರುವ ಇಬ್ಬರು ವಿದ್ಯಾರ್ಥಿನಿಯರಿಗೆ 2021  ಅಧಿಸೂಚನೆ ಅನ್ವಯ ಶೈಕ್ಷಣಿಕ ‌ಧನ ಸಹಾಯ ಪಾವತಿಯಿಸಲು‌‌‌ ಆದೇಶಿಸಿತ್ತು ಮತ್ತು ಮಕ್ಕಳನ್ನು ನ್ಯಾಯಾಲಯ ಮೆಟ್ಟಿಲು ಹತ್ತುವಂತೆ ಮಾಡಿದ‌ ಕಲ್ಯಾಣ ಮಂಡಳಿಗೆ ತಲಾ‌ ರೂ 25 ಸಾವಿರ ದಂಡ ವಿಧಿಸಿ ನಾಲ್ಕು ವಾರದೊಳಗೆ ಪಾವತಿಸಲು ಆದೇಶಿಸಿತ್ತು ಆದರೆ ನ್ಯಾಯಾಲಯದ ಆದೇಶವನ್ನು ಪಾಲಿಸದೇ ಕಲ್ಯಾಣ ಮಂಡಳಿ ವಿಳಂಬ ಧೋರಣೆ ಅನುಸರಿಸಿತ್ತು.

ಜೂನ್‌ 7 ರಂದು  ರಿಟ್ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ  ನ್ಯಾಯಮೂರ್ತಿಗಳು  ಬಡ ಕಾರ್ಮಿಕರ‌ ಮಕ್ಕಳ ವಿದ್ಯಾಭ್ಯಾಸಕ್ಕೆ ಧನಸಹಾಯ ನೀಡಲು ಮಾಡಿದ ಆದೇಶವನ್ನು ಜಾರಿಗೊಳಿಸದ ಕಲ್ಯಾಣ ಮಂಡಳಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದರುಬಿಸಿಲು ಮಳೆಯಲ್ಲಿ ಶ್ರಮಪಡುವ ಕಟ್ಟಡ ಕಾರ್ಮಿಕರ ದುಡಿಮೆಯಿಂದಾಗಿ ಸಾವಿರಾರು ಕೋಟಿ ಸೆಸ್ ಸಂಗ್ರಹವಾಗುತ್ತಿದೆ ಅದನ್ನು ಅವರ‌ ಮಕ್ಕಳ ವಿದ್ಯಾಬ್ಯಾಸಕ್ಕೆ ಖರ್ಚುಮಾಡಬೇಕೆ ಹೊರತು ಅಧಿಕಾರಿಗಳ ಓಡಾಟ‌ ಮತ್ತು ಐಶಾರಾಮಿ ಜೀವನಕ್ಕಲ್ಲ ಎಂದು‌ ಮಂಡಳಿ ನಡೆಯನ್ನು  

ಟೀಕಿಸಿದ್ದರುಅಲ್ಲದೆ ಮಂಡಳಿಯಲ್ಲಿ ಸಂಗ್ರಹವಿರುವ ರೂ 6700 ಕೋಟಿ ಹಣದ ವಿವರಗಳನ್ನು ಪೀಠದ‌ ಮುಂದೆ ಮಂಡಳಿಸಲು ತಾಕೀತು ಮಾಡಿ ವಿಚಾರಣೆಯನ್ನು ಮೂಂದೂಡಿದ್ದರು

 

ಪುನಃ ಜೂನ್ 25ರಂದು ವಿಚಾರಣೆ ಆರಂಭಗೊಂಡಾಗ ರಾಜ್ಯ ಸರ್ಕಾರ ಹಾಗೂ ಕಲ್ಯಾಣ ಮಂಡಳಿ ಪ್ರತಿನಿಧಿಸಿ  ಸರ್ಕಾರದ ಅಡ್ವೋಕೇಟ್ ಜನರಲ್  ಶಶಿಕಿರಣ ಶೆಟ್ಟಿ ಹಾಜರಾಗಿದ್ದರು ಅವರು ಕಲ್ಯಾಣ ಮಂಡಳಿಯು ಈಗಾಗಲೇ 6 ಲಕ್ಷ ವಿದ್ಯಾರ್ಥಿಗಳಿಗೆ ರೂ 500 ಕೋಟಿ ಶೈಕ್ಷಣಿಕ ಧನ ಸಹಾಯಧನ ವಿತರಿಸಿದೆ ಅಲ್ಲದೆ ಮಂಡಳಿಯಲ್ಲಿ 19 ಇತರೆ ಕಲ್ಯಾಣ ಕಾರ್ಯಕ್ರಮಗಳನ್ನು ಕಟ್ಟಡ ಕಾರ್ಮಿಕರಿಗಾಗಿ ಜಾರಿಗೊಳಿಸುತ್ತಿದೆ ಆದ್ದರಿಂದ 2021 ಅಧಿಸೂಚನೆ ಅನ್ವಯ ಶೈಕ್ಷಣಿಕ ಧನಸಹಾಯ ನೀಡಲು‌ ಕಷ್ಟವಾಗಲಿದೆ ಎಂದು ವಾದಿಸಿದರುಆದರೆ ಅವರ ವಾದವನ್ನು ಒಪ್ಪದ ನ್ಯಾಯಮೂರ್ತಿಗಳು ರಾಜ್ಯದಲ್ಲಿ ನಿರ್ಮಾಣ ಕಾಮಗಾರಿಗಳಿಂದ ಸಂಗ್ರಹವಾಗುವ ಸೆಸ್ ಹಣ ಕಾರ್ಮಿಕರ ಕಲ್ಯಾಣ ಮತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸ ಕ್ಕಾಗಿ ಖರ್ಚುಮಾಡಬೇಕಲ್ಲವೇ ? ಎಂದು ಪ್ರಶ್ನಿಸಿದ್ದರು.

 

ಇದಕ್ಕೆ ಪೂರಕವೆಂಬಂತೆ ಅರ್ಜಿದಾರರ ಪರವಾಗಿ ಹಾಜರಾಗಿದ್ದ ವಕೀಲ ಆದಿತ್ಯ ಚಟರ್ಜಿ 2019  ಕಂಟ್ರೋಲರ್ ಅಂಡ್ ಆಡಿಟರ್ ಜನರಲ್ (ಸಿಎಜಿ) ವರದಿಯು ಕರ್ನಾಟಕ ಕಟ್ಟಡ ನಿರ್ಮಾಣ ಕಲ್ಯಾಣ ಮಂಡಳಿಯು ತನ್ನ ಆಡಳಿತಾತ್ಮಕ ವೆಚ್ಚವನ್ನು ಕಾನೂನು ನಿಗದಿಪಡಿಸಿದ ಶೇ‌5 ರಷ್ಟನ್ನು ಮೀರಿ ಶೇ 9. ರಿಂದ ಶೇ 72 ರಷ್ಟು ಹೆಚ್ಚಾಗಿ ಖರ್ಚು ಮಾಡಿದೆ ಎಂದು ಸಿಎಜಿ ವರದಿಯ ಅಂಶವನ್ನು ಉಲ್ಲೇಖಿಸಿದರು ಅಲ್ಲದೆ ಹಿಂದೆ ಘಟನೋತ್ತರ ಅನುಮೋದನೆ‌ ಮೂಲಕ ಮಂಡಳಿಯು ಇನ್ನೋವಾ‌ ಕಾರುಗಳನ್ನು ಖರೀದಿಸುವ‌ ಮೂಲಕ ಮಂಡಳಿ ನಿಧಿಯನ್ನು ಅನಗತ್ಯವಾಗಿ ಖರ್ಚು ಮಾಡಿರುವ ಅಂಶಗಳತ್ತ ಬೆಳಕು ಚೆಲ್ಲಿದರು ಮತ್ತು ಇದುವರೆಗೂ ಮಧ್ಯಂತರ ಆದೇಶದಂತೆ ಇಬ್ಬರು ವಿದ್ಯಾರ್ಥಿನಿಯರಿಗೆ ಹಣ ಪಾವತಿ ‌ಮಾಡಿಲ್ಲ ಎನ್ನುವ ಸಂಗತಿಯನ್ನು ಪೀಠದ ಗಮನಕ್ಕೆ ತಂದಿದ್ದರು.

 

 ಬಗ್ಗೆ ಕಲ್ಯಾಣ ಮಂಡಳಿ ಪರವಾಗಿ ಹಾಜರಿದ್ದ ವಕೀಲರು ಇಬ್ಬರು ವಿದ್ಯಾರ್ಥಿನಿಯರಿಗೆ ಕೋರ್ಟ್ ಆದೇಶದಂತೆ ರೂ 60000 ಹಾಗೂ ರೂ 55000 ಹಣ ಪಾವತಿಸಿದೆ ಎಂದು ಹೇಳಿ ಅದರ ನಕಲು ಪ್ರತಿಯನ್ನು ಅರ್ಜಿದಾರ ವಕೀಲರಿಗೆ ನೀಡಿದ್ದರುಆದರೆ ನೀವು ಇಬ್ಬರೂ ವಿದ್ಯಾರ್ಥಿನಿಯರಿಗೆ ಧನಸಹಾಯ ಪಾವತಿಸಿದ ಮಾತ್ರಕ್ಕೆ  ವಿಚಾರಣೆ ಇಲ್ಲಿಗೆ ನಿಲ್ಲುವುದಿಲ್ಲ ಎನ್ನುವುದನ್ನು ಸ್ಷಷ್ಟಪಡಿಸಿದ  ಪೀಠ ಕಲ್ಯಾಣ‌ ಮಂಡಳಿಯಲ್ಲಿರುವ ಪ್ರತಿಯೊಂದು ರುಪಾಯಿಯು ಬಡ ಕಾರ್ಮಿಕರ ಕಲ್ಯಾಣ ಕಲ್ಯಾಣ ಮತ್ತು‌ ಮಕ್ಕಳ ಶೈಕ್ಷಣಿಕ ಬದುಕಿಗೆ ಖರ್ಚು‌ ಮಾಡಬೇಕು ಹೀಗಾಗಿ ಕಲ್ಯಾಣ ಮಂಡಳಿಯು ಮಾಡುತ್ತಿರುವ ಪ್ರತಿಯೊಂದು ಖರ್ಚಿನ ಲೆಕ್ಕವನ್ನು ನ್ಯಾಯಾಲಯದ ಮುಂದೆ ಮಂಡಿಸಲು ಆದೇಶಿಸಿ ಮುಂದಿನ ವಿಚಾರಣೆಯನ್ನು ಜುಲೈ 26 ಕ್ಕೆ ಮುಂದೂಡಿದೆ.

 

*ಹೋರಾಟಕ್ಕೆ ಸಿಕ್ಕ ಜಯ*

ಹೈಕೋರ್ಟ್ ‌ ಮಧ್ಯಂತರ ಆದೇಶದಂತೆ ರಿಟ್ ಅರ್ಜಿ ಸಲ್ಲಿಸಿದ ಇಬ್ಬರು ಬಡ

Post a Comment

0Comments

Post a Comment (0)