ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಏರ್ಪಡಿಸಿರುವ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಾವೇರಿಯ ಶ್ರೀ ಗುರುಸಿದ್ದರಾಮೇಶ್ವರ ಕಲ್ಯಾಣ ಮಂಟಪದಲ್ಲಿ ಜೂ.30ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಹಾವೇರಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಕಾರದಲ್ಲಿ ಏರ್ಪಡಿಸಿರುವ ಕಾರ್ಯಕ್ರಮವನ್ನು ಎಪಿಎಂಸಿ, ಸಕ್ಕರೆ ಮತ್ತು ಜವಳಿ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಉದ್ಘಾಟಿಸಲಿದ್ದು, ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ದಿಕ್ಸೂಚಿ ಮಾತುಗಳನ್ನಾಡಲಿದ್ದಾರೆ.
ಕಾನೂನು ಮತ್ತು ಸಂಸದೀಯ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಮತ್ತು ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನೆರವೇರಿಸಿಕೊಡಲಿದ್ದಾರೆ.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಮುಖ್ಯ ಸಚೇತಕ ಸಲೀಂ ಅಹಮದ್ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ವಹಿಸಲಿದ್ದಾರೆ.
ಶಾಸಕರಾದ ಶ್ರೀನಿವಾಸ ಮಾನೆ, ಬಸವರಾಜ ಶಿವಣ್ಣನವರ, ಯು.ಬಿ.ಬಣಕಾರ, ಪ್ರಕಾಶ್ ಕೋಳಿವಾಡ, ಜಿಲ್ಲಾಧಿಕಾರಿ ರಘುನಂದನಮೂರ್ತಿ, ಜಿಪಂ ಸಿಇಒ ಅಕ್ಷಯ ಶ್ರೀಧರ, ಎಸ್ಪಿಅಂಶು ಕುಮಾರ್, ನಗರಸಭೆ ಮಾಜಿ ಅಧ್ಯಕ್ಷ ಸಂಜೀವ ಕುಮಾರ್ ನೀರಲಗಿ ಅವರು ಭಾಗವಹಿಸಲಿದ್ದಾರೆ.
ಜಿಲ್ಲಾ ವಾರ್ತಾಧಿಕಾರಿ ಡಾ.ಬಿ.ಆರ್.ರಂಗನಾಥ್ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು. ದಿಲೀಪ್ ಕುರಂದವಾಡಿ ಅವರು ವಿದ್ಯಾರ್ಥಿಗಳಿಗೆ ಪ್ರೇರಣಾ ಭಾಷಣ ಮಾಡಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಿ.ವಿ.ಲೋಕೇಶ, ಕಾರ್ಯದರ್ಶಿ ನಿಂಗಪ್ಪ ಚಾವಡಿ ಅವರು ತಿಳಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.