ಬೆಂಗಳೂರು (ಕರ್ನಾಟಕ ವಾರ್ತೆ): ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ನೆರವನ್ನು ಒದಗಿಸುವ ನಿಟ್ಟಿನಲ್ಲಿ 1993ರ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮದ ಅಡಿಯಲ್ಲಿ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ಇದೇ ಜೂನ್ 26 ರಿಂದ 28 ರವರೆಗೆ ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಿಟ್ಟಿಂಗ್ಸ್ ನಡೆಸಲು ಉದ್ದೇಶಿಸಿರುತ್ತದೆ.
ಈ ಸಂದರ್ಭದಲ್ಲಿ ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಬಂಧಿಸಿದಂತೆ ಆಯೋಗದಲ್ಲಿ ನೋಂದಣಿಯಾಗಿರುವ ಪ್ರಕರಣಗಳನ್ನು ಆಯಾ ಜಿಲ್ಲೆಯಲ್ಲಿ ಇತ್ಯರ್ಥಪಡಿಸಿ, ವಿಲೇ ಮಾಡಲು ಕ್ರಮ ಜರುಗಿಸಲು ಉದ್ದೇಶಿಸಲಾಗಿದೆ. ದೂರುದಾರರು ಹಾಗೂ ಪ್ರತಿವಾದಿ ಪ್ರಾಧಿಕಾರಗಳು ಈ ಸೌಲಭ್ಯದ ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಲಾಗಿದೆ. ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯಲ್ಲಿ ಜೂನ್ 26 ಮತ್ತು 27 ರ ಪೂರ್ವಾಹ್ನ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೂನ್ 27 ರ ಅಪರಾಹ್ನ ಮತ್ತು ಜೂನ್ 28 ರಂದು ಸಾರ್ವಜನಿಕರಿಂದ ದೂರುಗಳು / ಅಹವಾಲುಗಳನ್ನು ಸಹ ಸ್ವೀಕರಿಸಲು ಉದ್ದೇಶಿಸಲಾಗಿದೆ. ಸಾರ್ವಜನಿಕರು ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಿಗದಿತ ದಿನಾಂಕಗಳಂದು ಆಯೋಗದ ಮಾನ್ಯ ಅಧ್ಯಕ್ಷರು ಹಾಗೂ ಸದಸ್ಯರುಗಳನ್ನು ಸಂಪರ್ಕಿಸಿ, ದೂರುಗಳನ್ನು ಸಲ್ಲಿಸಬಹುದು ಎಂದು ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Post a Comment
0Comments