ಬೆಂಗಳೂರು ಜಲಮಂಡಳಿಯಿಂದ ನೇರ ಪೋನ್ ಇನ್ ಕಾರ್ಯಕ್ರಮ

varthajala
0

 ಬೆಂಗಳೂರು(ಕರ್ನಾಟಕ ವಾರ್ತೆ): ಬೆಂಗಳೂರು ಜಲಮಂಡಳಿಯ ಅಧ್ಯಕ್ಷರಿಂದ ಜೂನ್ 14 ರಂದು ಶುಕ್ರವಾರ ಬೆಳಿಗ್ಗೆ 9.30 ಗಂಟೆಯಿಂದ 10.30 ಗಂಟೆಯವರೆಗೆ ನೇರ ಪೋನ್ ಇನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

 ಸಾರ್ವಜನಿಕರು ತಮ್ಮ ವಲಯ / ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳ ಚರಂಡಿ, ಕೊಳವೆ, ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ ಜಲಮಾಪನ ಹಾಗೂ ನೀರಿನ ಬಿಲ್ಲಿನಲ್ಲಿ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು – ಕೊರತೆಗಳನ್ನು ಬಗೆಹರಿಸಿಕೊಳ್ಳಲು ಈ ಪೋನ್ ಇನ್ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳುವುದು. ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್.ಆರ್. ಸಂಖ್ಯೆಯನ್ನು ತಿಳಿಸಿ ದೂರನ್ನು ನೀಡುವುದು. ಸಾರ್ವಜನಿಕರು ದೂರವಾಣಿ ಸಂಖ್ಯೆ 080-22945119 ಮತ್ತು 080-22229639 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.  

Post a Comment

0Comments

Post a Comment (0)