ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಗಳು ಗೃಹಲಕ್ಷ್ಮಿ ಯೋಜನೆಯಡಿ ಪ್ರಯೋಜನಕ್ಕೆ ಗುರುತಿನ ಚೀಟಿ ಪರಿಗಣಿಸಲು ಸರ್ಕಾರದ ಅನುಮೋದನೆ

varthajala
0

  ಬೆಂಗಳೂರು (ಕರ್ನಾಟಕ ವಾರ್ತೆ): ಲಿಂಗತ್ವ ಅಲ್ಪ ಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮಿ ಯೋಜನೆಯಡಿ ಪ್ರಯೋಜನ ಪಡೆಯಲು ಅನುವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ National Portal for Transgender Persons ವತಿಯಿಂದ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರವು ಅನುಮೋದನೆ ನೀಡಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಲಾಗಿದೆ.

ಜುಲೈ 8 ರಿಂದ ಲಿಂಗತ್ವ ಅಲ್ಪಸಂಖ್ಯಾತರು ಪ್ರಸ್ತುತ ವಾಸವಾಗಿರುವವರು ಮಹಿಳಾ ಮತ್ತು ಮಕ್ಕಳ ಅಭಿವರದ್ಧಿ ಇಲಾಖೆಯ ಉಪನಿರ್ದೇಶಕರ ಜಿಲ್ಲಾ ಕಚೇರಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಯ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಟ್ರಾನ್ಸ್-ಜೆಂಡರ್ ಗುರುತಿನ ಚೀಟಿ, ಪಾಸ್‍ಪೋರ್ಟ್ ಅಳತೆಯ ಪೋಟೋ ಮತ್ತು ಆಧಾರ್ ಕಾರ್ಡ್‍ನ್ನು ಕಡ್ಡಾಯವಾಗಿ ನೀಡಬೇಕಾಗಿರುತ್ತದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)