ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರವೇಶಕ್ಕೆ ಅರ್ಜಿ ಆಹ್ವಾನ

varthajala
0

 ಬೆಂಗಳೂರು (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ರ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದ್ದು, ಸ್ನಾತಕ/ ಸ್ನಾತಕೋತ್ತರ ಪದವಿಗಳು, ಡಿಪ್ಲೊಮಾ ಹಾಗೂ ಯುಜಿ/ಪಿಜಿ ಸರ್ಟಿಫಿಕೇಟ್ ಶಿಕ್ಷಣಕ್ರಮಗಳಿಗೆ ಈಗಾಗಲೇ ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಬಾಪೂಜಿನಗರ ಇಲ್ಲಿ ಆನ್ ಲೈನ್ ಮೂಲಕ ಪ್ರವೇಶಾತಿಯನ್ನು ಪ್ರಾರಂಭಿಸಲಾಗಿದ್ದು, ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟ್ www.ksoumysuru.ac.in  ನಲ್ಲಿ ಲಭ್ಯವಿರುವ ವಿವರಣಾ ಪುಸ್ತಕದಲ್ಲಿ ಎಲ್ಲಾ ವಿವರಗಳನ್ನು  ನೀಡಿದ್ದು ವಿದ್ಯಾರ್ಥಿಗಳು ಅದರನ್ವಯ ಅರ್ಹ ಶಿಕ್ಷಣ ಕ್ರಮಗಳಿಗೆ ಆನ್ ಲೈನ್ ಅಡ್ಮಿಷನ್ ಪೋರ್ಟಲ್ ಮೂಲಕ ಅಥವಾ ಖುದ್ದು ಅಗತ್ಯ ದಾಖಲಾತಿಗಳೊಂದಿಗೆ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿ ಪ್ರವೇಶಾತಿ ಪೂರ್ಣ ಪ್ರಕ್ರಿಯೆಯನ್ನು ಮಾಡಿಕೊಳ್ಳಬಹುದು.

ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಅಥವಾ ದಾಖಲಾತಿಗಳೊಂದಿಗೆ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿ ಪ್ರವೇಶ ಪಡೆಯಬಹುದು. ಹೆಚ್ಚಿನ ವಿವರಗಳಿಗೆ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ಕಛೇರಿ ದೂರವಾಣಿ ಸಂಖ್ಯೆ. : 080-26603664 98449-65515 ನ್ನು ಸಂಪರ್ಕಿಸಬಹುದಾಗಿದೆ ಎಂದು ಕರಾಮುವಿ ಪ್ರಕಟಣೆಯಲ್ಲಿ ತಿಳಿಸಿದೆ.

Post a Comment

0Comments

Post a Comment (0)