ಸೈಬರ್ ನೀತಿ ರೂಪಿಸುವ ಕುರಿತು ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಸಭೆ

varthajala
0

  ಬೆಂಗಳೂರು  (ಕರ್ನಾಟಕ ವಾರ್ತೆ): ಇಂದು ವಿಧಾನಸೌಧದ ಕೊಠಡಿ ಸಂಖ್ಯೆ 313 ರಲ್ಲಿ  ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದಲ್ಲಿ ಕಂದಕ ಸೃಷ್ಟಿಸಲು ಸುಳ್ಳು ಸುದ್ದಿಗಳನ್ನು ಹಬ್ಬಿಸುವ ಹಾಗೂ ತಿರುಚಿದ ಹೇಳಿಕೆಗಳನ್ನು ಹರಿಬಿಡುತ್ತಿರುವರ ವಿರುದ್ಧ ಕ್ರಮ ಜರುಗಿಸುವ ನಿಟ್ಟಿನಲ್ಲಿ ಸೈಬರ್ ನೀತಿಗಳನ್ನು ರೂಪಿಸುವ ಕುರಿತು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರ ನೇತೃತ್ವದಲ್ಲಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ರಾಜ್ಯ ಪೆÇಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಸಿಐಡಿ ಡಿಜಿಪಿ ಡಾ. ಎಂ.ಎ.ಸಲೀಂ, ಪ್ರಣವ್ ಮೊಹಂತಿ, ನಗರ ಪೆÇಲೀಸ್ ಆಯುಕ್ತ ಬಿ.ದಯಾನಂದ್, ಗುಪ್ತದಳ ವಿಭಾಗದ ಎಡಿಜಿಪಿ ಶರತ್ ಚಂದ್ರ, ರವಿ ಕುಮಾರ್, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಮುಂತಾದವರು ಉಪಸ್ಥಿತರಿದ್ದರು.

Post a Comment

0Comments

Post a Comment (0)