ಬೆಂಗಳೂರು(ಕರ್ನಾಟಕ ವಾರ್ತೆ) ಬೆಂಗಳೂರು ನಗರದಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚುವ ಕುರಿತು ಜುಲೈ 27ರಂದು ಶಾಸಕರ ಜೊತೆ ಚರ್ಚೆನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಇಂದು ವಿಧಾನಸಭೆಯಲ್ಲಿ ಜಯನಗರ ಶಾಸಕರಾದ ರಾಮಮೂರ್ತಿ ಸಿ.ಕೆ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಬೆಂಗಳೂರು ನಗರದÀ ಪಾಲಿಕೆ ವ್ಯಾಪ್ತಿಯಲ್ಲಿ ಅಂದಾಜು 16,202 ರಸ್ತೆ ಗುಂಡಿಗಳನ್ನು ಗುರುತಿಸಲಾಗಿದೆ. ಈ ಪೈಕಿ 15,686 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಹಾಗೂ ಉಳಿದ ಗುಂಡಿಗಳನ್ನು ಮುಚ್ಚಲು ಈಗಾಗಲೇ ಹಲವು ಕ್ರಮಗಳನ್ನು ವಹಿಸಲಾಗುತ್ತಿದೆ ಎಂದು ತಿಳಿಸಿದರು..Post a Comment
0Comments