ಬೆಂಗಳೂರು (ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಕೆಎಎಸ್ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಏರ್ಪಡಿಸಿದ್ದ 50 ದಿನಗಳ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಜುಲೈ 11 ರಂದು ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯ ಆವರಣದಲ್ಲಿರುವ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಮಾರೋಪ ಸಮಾರಂಭದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾದ ಡಾ.ಶಾಲಿನಿ ರಜನೀಶ್ ಅವರು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಕುರಿತು ಮುಖ್ಯ ಭಾಷಣ ಮಾಡಲಿದ್ದಾರೆ ಹಾಗೂ ಶಿಬಿರಾರ್ಥಿಗಳಿಗೆ ಶುಭ ಹಾರೈಸಲಿದ್ದಾರೆ.
ಮಂಡ್ಯದ ಜಿಲ್ಲಾಧಿಕಾರಿಯಾದ ಡಾ.ಕುಮಾರ್ ಅವರು ಸಮಾರಂಭದಲ್ಲಿ ಭಾಗವಹಿಸಿ ಶಿಬಿರಾರ್ಥಿಗಳಿಗೆ ಪ್ರೇರಣಾತ್ಮಕ ನುಡಿಗಳನ್ನಾಡುವುದರ ಜೊತೆಗೆ ಅವರರೊಂದಿಗೆ ಸಂವಾದ ನಡೆಸಲಿದ್ದಾರೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ. ಶರಣಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದು, ಕುಲಸಚಿವ ಪ್ರೊ. ಕೆ.ಬಿ. ಪ್ರವೀಣ ಅವರು ಉಪಸ್ಥಿತರಿರುವರು.
ಈ ತರಬೇತಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ 263 ಮಂದಿ ಶಿಬಿರಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.