ಬೆಂಗಳೂರು , (ಕರ್ನಾಟಕ ವಾರ್ತೆ )
ಕರ್ನಾಟಕ ವಿದಾನ ಸಭೆಯು, 2026ರಲ್ಲಿನ ಅಥವಾ ಅದರ ನಂತರ ನಡೆಸುವ ಹೊಸ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಪುನರ್ವಿಂಗಡಣಾ ಪ್ರಕ್ರಯೆಯನ್ನು ನಡೆಸಬಾರದೆಂದು ಜನಸಂಖ್ಯೆಯನ್ನು ಆಧರಿಸಿ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಸಂದರ್ಭದಲ್ಲಿ , ಪ್ರತಿ ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಮತ್ತು ಪ್ರತಿ ರಾಜ್ಯದ ವಿಧಾನ ಸಭೆಗೆ ನಿಗದಿಪಡಿಸಬೇಕಾದ ಸ್ಥಾನಗಳ ಒಟ್ಟು ಸಂಖ್ಯೆನ್ನು 1971ರ ಜನಗಣತಿಯನ್ನಾಧರಿಸಿ ನಿರ್ಧರಿಸಬೇಕೆಂದು ಕೇಂದ್ರ ಸರ್ಕಾರವನ್ನು ಈ ಸದನವು ಒತ್ತಾಯಿಸುತ್ತದೆ ಎಂಬ ನಿರ್ಣಯವನ್ನು ಮಾನ್ಯ ಮುಖ್ಯಮಂತ್ರಿಗಳ ಪರವಾಗಿ ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್ ವಿಧಾನಸಭೆಯಲ್ಲಿ ಮಂಡಿಸಿದರು. ನಿರ್ಣಯವು ಸರ್ವಾನುಮತದಿಂದ ಅಂಗೀಕರವಾಯಿತು.
ಈ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ನೀಡಬೇಕೆಂದು ಹಾಗೂ ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಅಂಕಗಳನ್ನಾಧರಿಸಿ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶಾತಿ ನೀಡಬೇಕೆಂದು ಮತ್ತು ನೀಟ್ ಪರೀಕ್ಷೆಗಳಲ್ಲಿ ಆಗುತ್ತಿರುವ ಪುನರಾವರ್ತಿತ ಆಕ್ರಮಗಳನ್ನು ಪರಿಗಣಿಸಿ ರಾಷ್ಟ್ರೀಯ ಮಟ್ಟದಲ್ಲಿ ನೀಟ್ ವ್ಯವಸ್ಥೆಯನ್ನು ರದ್ದುಪಡಿಸುವ, ಹಾಗೆ ಕೇಂದ್ರ ಸರ್ಕಾರವು ರಾಷ್ಟ್ರೀಯ ವೈದ್ಯಕೀಯ ಆಯೋಗ ಅಧಿನಿಯಮ, 2019 (2019ರ ಕೇಂದ್ರ ಅಧಿನಿಯಮ 30)ರಲ್ಲಿ ಅಗತ್ಯ ತಿದ್ದುಪಡಿಗಳನ್ನೂ ಸಹ ಮಾಡುವಂತೆ ಕೇಂದ್ರ ಸರ್ಕಾರವನ್ನು ಈ ಸದನವು ಒತ್ತಾಯಿಸುತ್ತದೆ ಎಂಬ ನಿರ್ಣಯವನ್ನು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ:ಶರಣಪ್ರಕಾಶ್ ಪಾಟೀಲ್ ರವರು ಮಂಡಿಸಿದರು. ನಿರ್ಣಯವು ಸರ್ವಾನುಮತದಿಂದ ಅಂಗೀಕರವಾಯಿತು.
"ಅರಣ್ಯ ವಾಸಿ ಅನುಸೂಚಿತ ಬುಡಕಟ್ಟುಗಳಿಗೆ ಸಮಾನವಾಗಿ ಇತರ ಪಾರಂಪರಿಕ ಅರಣ್ಯ ವಾಸಿಗಳನ್ನು ಪರಿಗಣಿಸುವ ಹಾಗೆ, ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳ (ಅರಣ್ಯ ಹಕ್ಕುಗಳ ಮಾನ್ಯತೆ) ಅಧಿನಿಯಮ, 2006 (2007 ರ ಕೇಂದ್ರ ಅಧಿನಿಯಮ 02) ಮತ್ತು ಅದರಡಿಯಲ್ಲಿ ಮಾಡಲಾದ ನಿಯಮಗಳನ್ನು ಸೂಕ್ತವಾಗಿ ಮತ್ತು ಸಮರ್ಪಕವಾಗಿ ಮಾರ್ಪಡಿಸುವಂತೆ ಕೇಂದ್ರ ಸರ್ಕಾರವನ್ನು ಈ ಸದನವು ಒತ್ತಾಯಿಸುತ್ತದೆ." ಎಂಬ ನಿರ್ಣಯವನ್ನು ಆರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆ ವಿಧಾನಸಭೆಯಲ್ಲಿ ಮಂಡಿಸಿದರು. ನಿರ್ಣಯವು ಸರ್ವಾನುಮತದಿಂದ ಅಂಗೀಕರವಾಯಿತು.