ಜನಪರ ಕಾರ್ಯಕ್ರಮಗಳು ಸಕಾಲದಲ್ಲಿ ಜನರಿಗೆ ತಲುಪಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಸೂಚನೆ

varthajala
0
ಬೆಂಗಳೂರು (ಕರ್ನಾಟಕ ವಾರ್ತೆ): ಜನರಿಗಾಗಿ ನಾವು ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಎಲ್ಲಾ ಜನಪರ ಕಾರ್ಯಕ್ರಮಗಳು ಸಕಾಲದಲ್ಲಿ ಜನರಿಗೆ ತಲುಪುವಂತಾಗಬೇಕು. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಕಾರ್ಯ ನಿರ್ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಇದು ಅಧಿಕಾರಿಗಳನ್ನು ಟೀಕೆ ಮಾಡಲು ಕರೆದ ಸಭೆ ಅಲ್ಲ. ಜಿಲ್ಲೆಯಲ್ಲಿ ಅಭಿವೃದ್ಧಿ ಯಾವ ರೀತಿ ಮಾಡಿದ್ದೀರಿ ಎಂದು ಪರಿಶೀಲಿಸಲು ಕರೆದ ಸಭೆ ಇದು. ಪ್ರತಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಜಿಲ್ಲಾಧಿಕಾರಿಗಳು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಪಾತ್ರ ದೊಡ್ಡದು. ಇವರು ಮೂರು ಜನ ಸಮನ್ವಯದಿಂದ ಬೇರೆ ಅಧಿಕಾರಿಗಳನ್ನು ಜೊತೆಗೆ ಕರೆದೊಯ್ಯುವ ಪ್ರಯತ್ನ ಮಾಡಿದರೆ ಅಭಿವೃದ್ಧಿ ವೇಗವಾಗಿ ಮಾಡಲು ಸಾಧ್ಯ ಎಂದು ತಿಳಿಸಿದರು.

ನಾನು ಮಂತ್ರಿಯಾಗಿ 40 ವರ್ಷಗಳಾದವು. 40 ಕ್ಕೂ ಹೆಚ್ಚು ವರ್ಷಗಳಿಂದ ಅಧಿಕಾರಿಗಳ ಕಾರ್ಯ ವೈಖರಿಯನ್ನು ನೋಡುತ್ತಿದ್ದೇನೆ. ರಾಜಕಾರಣಿಗಳು, ಅಧಿಕಾರಿಗಳು ಅನುಭವದ ಮೇಲೆ ಆಡಳಿತ ಹೆಚ್ಚು ಪರಿಣಾಮಕಾರಿಯಾಗಬೇಕು. ಆದರೆ ನಿರೀಕ್ಷಿತ ಮಟ್ಟದಲ್ಲಿ ಪರಿಣಾಮಕಾರಿಯಾಗಿಲ್ಲ. ಹಿಂದೆ ಭ್ರμÁ್ಟಚಾರ ಹೇಗಿತ್ತು, ಇಂದು ಹೇಗಿದೆ ಎಂದು ನೋಡಿದಾಗ, ಕಾರ್ಯಾಂಗ ಮತ್ತು ಶಾಸಕಾಂಗ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬುದು ಕಂಡುಬರುತ್ತದೆ. ಕಾಯಾರ್ಂಗ, ಶಾಸಕಾಂಗ ಮತ್ತು ನ್ಯಾಯಾಂಗ ಪರಿಣಾಮಕಾರಿಯಾಗಿ ಕೆಲಸಮಾಡಬೇಕು ಎಂದು ತಿಳಿಸಿದರು.
                        

ಕರ್ನಾಟಕ ರಾಜ್ಯ, ಆಡಳಿತ ವ್ಯವಸ್ಥೆಯಲ್ಲಿ ಮುಂಚೂಣಿಯಲ್ಲಿದೆ. ನೀವು ಕೆಲಸ ಮಾಡುವ ಜಿಲ್ಲೆಯ ಬಗ್ಗೆ ಮೊದಲೇ ತಿಳಿದುಕೊಂಡಿರಬೇಕು. ಅಲ್ಲಿನ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿ-ಗತಿಗಳ ಬಗ್ಗೆ ಅರಿತುಕೊಳ್ಳಬೇಕು. ಅಲ್ಲಿನ ಸಾಕ್ಷರತೆ, ಶಿಕ್ಷಣ, ತಲಾ ಆದಾಯ ಮೊದಲಾದವುಗಳ ಕುರಿತು ತಿಳಿದುಕೊಂಡು ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 10 ರಷ್ಟು ಕಡಿಮೆಯಾಗಿದೆ. ಪರೀಕ್ಷಾ ಅಕ್ರಮಗಳನ್ನು ನಿಯಂತ್ರಣದಲ್ಲಿಟ್ಟಿರುವುದೇ ಒಂದು ಕಾರಣವಾಗಲು ಸಾಧ್ಯವಿಲ್ಲ. ಇನ್ನು ಮುಂದೆ ಹೀಗೆ ಆಗದಂತೆ ನೋಡಿಕೊಳ್ಳಬೇಕು. ಎಲ್ಲಾ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಜವಾಬ್ದಾರಿ ಹೆಚ್ಚಿದ್ದು, ಎಲ್ಲರೂ ಒಟ್ಟಿಗೆ ಕುಳಿತು ಚರ್ಚೆ ಮಾಡಿ ಫಲಿತಾಂಶ ಹೆಚ್ಚಿಸಲು ಪ್ರಯತ್ನಿಸಬೇಕು.  

ಜನಸ್ಪಂದನದಲ್ಲಿ ಸ್ವೀಕೃತವಾಗುವ ಎಲ್ಲಾ ಅರ್ಜಿಗಳನ್ನು ಸಕಾರಾತ್ಮಕ ವಿಲೇವಾರಿ ಮಾಡಲು ಕ್ರಮ ವಹಿಸಬೇಕು. ಯಾವುದೇ ರೀತಿಯ ವಿಳಂಬಕ್ಕೆ ಅಸ್ಪದ ನೀಡಬಾರದು. ಸಕಾಲದಲ್ಲಿ ಎಲ್ಲಾ ಅರ್ಜಿಗಳು ವಿಲೇವಾರಿ ಆಗಬೇಕು.  ಎಲ್ಲಾ ಅಧಿಕಾರಿಗಳು ಗೆಜೆಟಿಯರ್ ಮತ್ತು ಎಕನಾಮಿಕ್ ಸರ್ವೇಗಳನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳಲು ಸಹ ತಿಳಿಸಿದರು.

ಜಿಲ್ಲಾಧಿಕಾರಿಗಳು ಗೆÀಜೆಟಿಯರ್, ಎಕನಾಮಿಕ್ ಸರ್ವೇ ಓದಿದರೆ ಆ ಜಿಲ್ಲೆಯ ಇತಿಹಾಸ, ಸ್ಥಿತಿಗತಿಗಳನ್ನು ಅರಿತುಕೊಳ್ಳಲು ಸಾಧ್ಯ. ಫ್ರೇಸರ್ ಎಂಬ ಅಧಿಕಾರಿಯ ಸಲಹೆ ಇಲ್ಲದೆ ನಾಲ್ವಡಿ ಕೃಷ್ಣರಾಜ ಒಡೆಯರ್, ಗಾಯಕ್‍ವಾಡ್, ಶಾಹು ಮಹಾರಾಜ ಮೊದಲಾದವರು ಒಳ್ಳೆಯ ಅರಸರೆಂದು ಹೆಸರುಗಳಿಸಲು ಸಾಧ್ಯವಾಗುತ್ತಿರಲಿಲ್ಲ. ಬಳ್ಳಾರಿಯಲ್ಲಿ ಮನ್ರೋ ಎಂಬ ಅಧಿಕಾರಿ ಕಲೆಕ್ಟರ್ ಆಗಿದ್ದರು. ಇಂದಿಗೂ ಅಲ್ಲಿನ ಜನ ತಮ್ಮ ಮಕ್ಕಳಿಗೆ ಅವರ ಹೆಸರಿಡುತ್ತಾರೆ. ನಾವೆಲ್ಲರೂ ಜನಸೇವಕರು ಎಂಬ ಭಾವನೆಯಿಂದ ಕೆಲಸ ನಿರ್ವಹಿಸಬೇಕು. ಆಗ ಮಾತ್ರ ಜನಪರ ಆಡಳಿತ ನೀಡಲು ಸಾಧ್ಯವಾಗುತ್ತದೆ.
                        

ನಮ್ಮ ಜನರು ತಮ್ಮ ಮಕ್ಕಳಿಗೆ ನಿಮ್ಮ ಹೆಸರು ಇಡುವ ರೀತಿಯಲ್ಲಿ ಗುಣಾತ್ಮಕವಾಗಿ, ಪರಿಣಾಮಕಾರಿಯಾಗಿ ಕೆಲಸ ಮಾಡಲು ಅವಕಾಶಗಳಿವೆ, ನಿಮ್ಮಿಂದ ಇದು ಸಾಧ್ಯವಿದೆ. ಬಡವರ ಬಗ್ಗೆ ಅನುಕಂಪ ಇರಬೇಕು. ಅಸಮಾನತೆ ನೀಗಿಸಲು ಪ್ರಯತ್ನಿಸಬೇಕು. ಬಸವಣ್ಣ, ಗಾಂಧೀಜಿ, ಅಂಬೇಡ್ಕರ್ ಅವರನ್ನು ಓದುತ್ತೇವೆ. ಸಂವಿಧಾನ ಅರಿತುಕೊಳ್ಳಬೇಕು ಎಂದು ಹೇಳುತ್ತೇವೆ. ಇದು ಕೇವಲ ಓದುವುದಕ್ಕಲ್ಲ, ಅನುμÁ್ಠನ ಮಾಡುವುದಕ್ಕೆ ಎಂಬುದನ್ನು ಅರಿತುಕೊಳ್ಳಿ. ಈ ಸೇವೆಯನ್ನು ಆಯ್ಕೆ ಮಾಡಿಕೊಂಡಿದ್ದೀರಿ.  ಪರಿಸ್ಥಿತಿ ಬದಲಾದಂತೆ ನಾವೂ ಬದಲಾಗಬೇಕು ಎಂದು ತಿಳಿಸಿದರು.

ರಾಜ್ಯದಲ್ಲಿ ಇತ್ತೀಚೆಗೆ ಡೆಂಘಿ ಕಾಯಿಲೆ ಹೆಚ್ಚಾಗುತ್ತಿದ್ದು, ಇದರ ನಿಯಂತ್ರಣಕ್ಕೆ ಆರೋಗ್ಯಾಧಿಕಾರಿಗಳು, ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಅಗಿಂದಾಗ್ಗೆ ಔಷಧಿಗಳ ಸಿಂಪಡಣೆ ಮಾಡಲು ಕ್ರಮ ವಹಿಸಿ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ತಿಳಿಸಿದರು. ಎಲ್ಲರೂ ಒಟ್ಟಾಗಿ ಕಾರ್ಯನಿರ್ವಹಿಸಿ ಡೆಂಘಿ ನಿಯಂತ್ರಣಕ್ಕೆ ಕ್ರಮವಹಿಸಿ. ಕಲುಷಿತ ನೀರು ಕುಡಿದು ಹಲವು ಸಾವು- ನೋವುಗಳು ಸಂಭವಿಸಿವೆ. ಇಂತಹ ಪ್ರಕರಣಗಳು ಮರುಕಳಿಸಿದರೆ, ಹಿರಿಯ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು. ವಲಸೆ ಕುರಿಗಾರರ ಹಿತ ಕಾಪಾಡಿ. ವಲಸೆ ಕುರಿಗಳ ಆಕಸ್ಮಿಕ ಮರಣ ಸಂಭವಿಸಿದಲ್ಲಿ ಮಾಲೀಕರಿಗೆ ತ್ವರಿತವಾಗಿ ಪರಿಹಾರ ವಿತರಿಸಬೇಕು ಎಂದು ತಿಳಿಸಿದರು.

ಸಿಂಧುತ್ವ ಪ್ರಮಾಣ ಪತ್ರ ಸಕಾಲದಲ್ಲಿ ನೀಡಬೇಕು. ಇವುಗಳನ್ನು ಬಾಕಿ ಉಳಿಸಿಕೊಳ್ಳದೆ ಸೂಕ್ತ ಆದೇಶ ಹೊರಡಿಸಬೇಕು. ಅಭ್ಯರ್ಥಿಗಳಿಗೆ ಸಕಾಲದಲ್ಲಿ ಸಿಂಧುತ್ವ ಪ್ರಮಾಣ ಪತ್ರ ನೀಡದೆ ಇದ್ದರೆ ಅವರ ಭವಿಷ್ಯ ಹಾಳಾಗುವುದು. ಈ ನಿಟ್ಟಿನಲ್ಲಿ ಸಕಾಲದಲ್ಲಿ ಅಭ್ಯರ್ಥಿಗಳಿಗೆ ಸಿಂಧುತ್ವ ಪ್ರಮಾಣಪತ್ರಗಳನ್ನು ವಿತರಿಸಲು ಕ್ರಮ ವಹಿಸಲು ಸೂಚಿಸಿದರು.  

ಗಂಗಾ ಕಲ್ಯಾಣ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸಲು ಬಾಕಿ ಉಳಿದಿರುವ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ಕ್ರಮ ವಹಿಸಿ. ಬುಡಕಟ್ಟು ಜನರಿಗೆ ಅರಣ್ಯ ಜಮೀನು ಮಂಜೂರು ಮಾಡಲು 26,126 ಅರ್ಜಿಗಳು ಬಾಕಿ ಇವೆ. ಇವುಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ಅವರ ಹಾಡಿಗಳಿಗೆ ಹೋಗಲು ರಸ್ತೆ ಸಂಪರ್ಕ ಇರುವುದಿಲ್ಲ. ಈ ಬಗ್ಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಸೂಕ್ತ ಸುತ್ತೋಲೆ ಹೊರಡಿಸಲು ಸಭೆಯಲ್ಲಿ ಸೂಚಿಸಿದರು.

ರಾಜ್ಯದಲ್ಲಿ 2225 ಗ್ರಾಮಗಳು ಮತ್ತು 2038334 ಜನರು ಪ್ರವಾಹ, ಭೂ ಕುಸಿತಕ್ಕೆ ಪ್ರತೀ ವರ್ಷ ತುತ್ತಾಗುತ್ತಾರೆ. ನಿಮ್ಮ ನಿಮ್ಮ ಜಿಲ್ಲೆಗಳಲ್ಲಿನ ಸಂತ್ರಸ್ಥ. ಗ್ರಾಮಗಳನ್ನು ಗುರುತಿಸಿ ಅವರಿಗೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಿ. ಈ ವರ್ಷ ಮಳೆಯಿಂದ ಮನೆ, ಬೆಳೆ ಹಾನಿ ಆಗಿರುವವರಿಗೆ ಎಸ್‍ಡಿಆರ್‍ಎಫ್ ಪ್ರಕಾರ ಪರಿಹಾರವನ್ನು ಕೂಡಲೇ ಇತ್ಯರ್ಥ ಮಾಡಲು ತಿಳಿಸಿದರು.

ಪಿಂಚಣಿಗಳ ವಿಲೇ ಅವಧಿ ಸದ್ಯ 45 ದಿನ ಇದೆ. ಇದನ್ನು 30 ದಿನಕ್ಕೆ ಇಳಿಸಲಾಗುವುದು. ಪಿಂಚಣಿ ಅರ್ಜಿಗಳು ಯಾವ ಯಾವ ಜಿಲ್ಲೆಗಳಲ್ಲಿ ಎμÉ್ಟಷ್ಟು ಬಾಕಿ ಇವೆ ಎನ್ನುವ ಪಟ್ಟಿ ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು ಆಯಾ ಜಿಲ್ಲಾಧಿಕಾರಿಗಳಿಗೆ ಕಾಲಮಿತಿಯೊಳಗೆ ಇತ್ಯರ್ಥ ಮಾಡಬೇಕು ಎನ್ನುವ ಸೂಚನೆ ನೀಡಿದರು. ಕಾಲ ಮಿತಿ ಮೀರಿದ ಅರ್ಜಿಗಳು ಏಕೆ ಬಾಕಿ ಇದೆ, ಅವುಗಳನ್ನು ಕೂಡಲೇ ಇತ್ಯರ್ಥಪಡಿಸಲು  ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಕಾನೂನು ಪ್ರಕಾರವೇ ಉದಾರತನದಿಂದ ವರ್ತಿಸಿ ಪರಿಹಾರ ನೀಡಿ ನೀಡಿ, ಸಣ್ಣ ಪುಟ್ಟ ತಾಂತ್ರಿಕ ಕಾರಣಗಳಿಗಾಗಿ ರೈತರ ಆತ್ಮಹತ್ಯೆ ಪರಿಹಾರದ ಅರ್ಜಿಗಳನ್ನು ತಿರಸ್ಕರಿಸದೆ ಉದಾರವಾಗಿ ವರ್ತಿಸಿ ರೈತ ಕುಟುಂಬಗಳಿಗೆ ಸಹಾಯ ಮಾಡಿ ಎಂದು ತಿಳಿಸಿದರು.

ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪನೋಂದಣಾಧಿಕಾರಿಗಳ ಕಚೇರಿಗಳಿಗೆ ಪ್ರತಿ ತಿಂಗಳು ಕೋಟಿಗಟ್ಟಲೆ ಬಾಡಿಗೆ ನೀಡುತ್ತಿದ್ದೇವೆ. ಇವರಿಗೆ ಸ್ವಂತ ಕಟ್ಟಡ ಕೊಡಿ. ಸ್ವಂತ ಕಟ್ಟಡದ ಅವಕಾಶ ಇಲ್ಲದಿದ್ದರೆ ಜಾಗ ನೀಡಿ ಕಟ್ಟಡ ಕಟ್ಟಿಸಿ.  ಇದರಿಂದ ನಮಗೆ ವರ್ಷಕ್ಕೆ 40-50 ಕೋಟಿ ಬಾಡಿಗೆ ಹಣ ಉಳಿತಾಯವಾಗುತ್ತದೆ ಎಂದು ಸೂಚನೆ ನೀಡಿದರು. 

Post a Comment

0Comments

Post a Comment (0)