ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಅಳವಡಿಸಲು ಕ್ರಮ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

varthajala
0

 ಬೆಂಗಳೂರು (ಕರ್ನಾಟಕ ವಾರ್ತೆ) : ಕೃಷಿ  ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಅಳವಡಿಸುವ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ಆಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಎಸ್. ಕೇಶವ ಪ್ರಸಾದ್ ಅವರ ಪ್ರಶ್ನೆಗೆ  ಉತ್ತರಿಸಿದ ಸಚಿವರು,  ತಂತಿ ಬೇಲಿ ಅಳವಡಿಸಲು  ಸರ್ಕಾರದಿಂದ ಶೇ.40 ರಿಂದ ಶೇ. 50ರ ವರೆಗೆ ಸಬ್ಸಿಡಿ ನೀಡಲಾಗುತ್ತಿದೆ ಎಂದರು.



ಕಳೆದ ಮೂರು ವರ್ಷಗಳಲ್ಲಿ ಕೃಷಿ ಭಾಗ್ಯ ಯೋಜನೆಯಡಿ 6,601  ಕೃಷಿ  ಹೊಂಡಗಳನ್ನು ನಿರ್ಮಿಸಲು ರೂ.2,332.75 ಲಕ್ಷ ವೆಚ್ಚ ಭರಿಸಲಾಗಿದೆ. ಜಲಾನಯನ ಅಭಿವೃದ್ಧಿ ಇಲಾಖೆಯಿಂದ ಕಳೆದ ಮೂರು ವರ್ಷಗಳಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ  ಹಾಗೂ ಇತರೆ ಉಪಚಾರಗಳು  ಯೋಜನೆಯಡಿ ರೂ. 1297.82 ಲಕ್ಷಗಳ ವೆಚ್ಚದಲ್ಲಿ  3,768 ಕೃಷಿ ಹೊಂಡಗಳು ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ  ಯೋಜನೆಯಡಿ ರೂ. 18874.96 ಲಕ್ಷಗಳ ವೆಚ್ಚದಲ್ಲಿ  23,317 ಕೃಷಿ  ಹೊಂಡಗಳನ್ನು ನಿರ್ಮಾಣ ಮಾಡಿದೆ ಎಂದರು

ಕೃಷಿ ಇಲಾಖೆಯ 2023-24ನೇ  ಸಾಲಿನ ಕೃಷಿ ಭಾಗ್ಯ ಯೋಜನೆಯ ಅನುμÁ್ಠನ ಮಾರ್ಗ ಸೂಚಿಯನ್ವಯ ರೈತರು ಸ್ವತಃ ಕೃಷಿ ಹೊಂಡಗಳನ್ನು ನಿರ್ಮಿಸಿಕೊಳ್ಳಬಹುದಾಗಿದ್ದು, ಯಾವುದೇ ಬಾಹ್ಯ ಸಂಸ್ಥೆಗಳಿಂದ  ಕೃಷಿ ಹೊಂಡ ನಿರ್ಮಿಸಲು ಅವಕಾಶವಿರುವುದಿಲ್ಲ. ಕೃಷಿ ಹೊಂಡ ನಿರ್ಮಿಸಿಕೊಂಡ ರೈತರಿಗೆ ಸಹಾಯ ಧನವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುವುದು ಎಂದರು

Post a Comment

0Comments

Post a Comment (0)