ಬೆಂಗಳೂರು (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರವು ಕೆಇಎ (ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನ ಸಹಾಯ ಆಯೋಗದವರು ನಡೆಸಲಿರುವ ರಾಷ್ಟç ಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯವೇತನ ಸಂಶೋಧನ ಸಹಾಯಕರ (ಜೆಆರ್‌ಎಫ್) ಪರೀಕ್ಷೆಗಳಿಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
ಆಸಕ್ತರು ಆಗಸ್ಟ್ 09 ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು ಹಾಗೂ ಹೆಚ್ಚಿನ ವಿವರಗಳಿಗೆ 0821-2515944 ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ಕೆ.ಬಿ. ಪ್ರವೀಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.