ವಿದ್ಯಾವಂತರಿಂದಲೇ ಇಂದು ಭ್ರಷ್ಟಾಚಾರ ಹೆಚ್ಚುತ್ತಿದೆ : ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂಗೋಷ್ ಹಗಡೆ ಕಳವಳ
ಬೆಂಗಳೂರು; ಶಿಕ್ಷಣ ಸಂಸ್ಥೆಗಳು ವಿದ್ಯೆಯ ಜೊತೆ ವಿದ್ಯಾರ್ಥಿಗಳ ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಹೇಳಿದ್ದಾರೆ.
ನಗರದ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ “ವಿದ್ಯಾ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ - ವಿ.ಎಸ್.ಐ.ಜಿ” ಶಿಕ್ಷಣ ಸಂಸ್ಥೆಯ ದಶಮಾನೋತ್ಸವ ಉದ್ಘಾಟಿಸಿ 10 ಮತ್ತು 12 ನೇ ತರಗತಿಯಲ್ಲಿ ಉತ್ತಮ ಸಾಧನೆ ಮಾಡಿದವರನ್ನು ಸನ್ಮಾನಿಸಿ ಮಾತನಾಡಿದ ಅವರು, ವಿದ್ಯಾವಂತರಿಂದಲೇ ಇಂದು ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಲು ಯುವ ಸಮೂಹ ಮುಂದಾಗಬೇಕು ಎಂದರು.
ಶಿಕ್ಷಣ ತಜ್ಞ ಗುರುರಾಜ ಕರ್ಜಗಿ ಮಾತನಾಡಿ, ಶಿಕ್ಷಣ ಕ್ಷೇತ್ರ ಇಂದು ಅಗಾಧವಾಗಿ ಬೆಳವಣಿಗೆಯಾಗುತ್ತಿದ್ದು, ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅನನ್ಯ ಎಂದು ಹೇಳಿದರು.
ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ.ಕೆ. ಗೋವಿಂದ ರಾಜ್, ಸಾಲುಮರದ ತಿಮ್ಮಕ್ಕ, ಥಟ್ ಅಂತ ಹೇಳಿ ಖ್ಯಾತಿಯ ಡಾ. ನಾ. ಸೋಮೇಶ್ವರ ಮತ್ತಿತರ ಗಣ್ಯರನ್ನು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮಂಜೇಗೌಡ ಗೌರವಿಸಿದರು.
ಶಿಕ್ಷಣ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಪವನ್ ಮಂಜೇಗೌಡ ಮತ್ತಿತತರೆ ಗಣ್ಯರು ಉಪಸ್ಥಿತರಿದ್ದರು.
ಚಿತ್ರಶೀರ್ಷಿಕೆ: ನಗರದ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ವಿ.ಎಸ್.ಐ.ಜಿ ಶಿಕ್ಷಣ ಸಂಸ್ಥೆಯ ದಶಮಾನೋತ್ಸವಕ್ಕೆ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಸಂತೋಷ್ ಹೆಗಡೆ ಚಾಲನೆ ನೀಡಿದರು. ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದ ಸ್ವಾಮೀಜಿ. ಶಿಕ್ಷಣ ತಜ್ಞ ಗುರುರಾಜ ಕರ್ಜಗಿ, ಸಾಹಿತಿ ಡಾ. ನಾ. ಸೋಮೇಶ್ವರ, ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮಂಜೇಗೌಡ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.