ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಪ್ರವಾಸ

varthajala
0

 ಬೆಂಗಳೂರು(ಕರ್ನಾಟಕ ವಾರ್ತೆ) : ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರು ಆಗಸ್ಟ್ 1 ರಿಂದ 3 ರವರೆಗೆ ಶಿವಮೊಗ್ಗ ಜಿಲ್ಲೆಯ ಪ್ರವಾಸ ಕೈಗೊಂಡು, ಆಗಸ್ಟ್ 3 ರಂದು ರಾತ್ರಿ  ಕೇಂದ್ರ ಸ್ಥಾನಕ್ಕೆ ವಾಪಸ್ಸಾಗಲಿರುವರು ಎಂದು ಕನ್ನಡ ಅಭಿವೃದ್ಧಿ ಪ್ರಾದಿಕಾರ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಛಾಯಾಚಿತ್ರ ಶೀರ್ಷಿಕೆ :

1. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು  ನವದೆಹಲಿಯಲ್ಲಿ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

2. ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರು ಇಂದು  ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ನವರನ್ನು ಸೌಹಾರ್ದಿತವಾಗಿ ಭೇಟಿ ಮಾಡಿದರು

3. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಇಂದು ದೆಹಲಿಯಲ್ಲಿ, ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್.ಪಾಟೀಲ್ ರವರನ್ನು ಸೌಹಾರ್ದಯುತವಾಗಿ ಭೇಟಿಯಾದರು. ಈ ಸಂದರ್ಭದಲ್ಲಿ  ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಅವರು ಉಪಸ್ಥಿತರಿದ್ದರು.

4. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಇಂದು ದೆಹಲಿಯಲ್ಲಿ,ಕೇಂದ್ರ ನಗರ ಮತ್ತು ವಸತಿ ವ್ಯವಹಾರಗಳ ಸಚಿವ ಮನೋಹರಲಾಲ್ ಕಟ್ಟರ್ ಅವರನ್ನು ಸೌಹಾರ್ದಯುತವಾಗಿ ಭೇಟಿಯಾದರು. ಈ ಸಂದರ್ಭದಲ್ಲಿ   ಕರ್ನಾಟಕ ಸರಗಕಾರದ ನವದೆಹಲಿ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ ಅವರು ಉಪಸ್ಥಿತರಿದ್ದರು.

Post a Comment

0Comments

Post a Comment (0)