ಬೆಂಗಳೂರು (ಕರ್ನಾಟಕ ವಾರ್ತೆ) ಪ್ರವಾಸೋದ್ಯಮ ಅಭಿವೃದ್ಧಿಗೆ 2024-25ನೇ ಸಾಲಿನಲ್ಲಿ ರಾಜ್ಯದ ವಿವಿಧ ಪ್ರವಾಸಿ ತಾಣಗಳಲ್ಲಿ ಪ್ರವಾಸಿ ಸೌಲಭ್ಯಗಳಾದ ಯಾತ್ರಿ ನಿವಾಸ, ಡಾರ್ಮಿಟರಿ, ಶೌಚಾಲಯ, ಅಂತಿಮ ಹಂತದ ಕೂಡು ರಸ್ತೆ, ಮೆಟ್ಟಿಲುಗಳು, ಕುಡಿಯುವ ನೀರಿನ ಸೌಲಭ್ಯ ಇತ್ಯಾದಿ ಮೂಲಭೂತ ಸೌಕರ್ಯಗಳನ್ನು ಕೈಗೊಳ್ಳಲು ಕ್ರಿಯಾಯೋಜನೆಯನ್ನು ಸಿದ್ದಪಡಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ತಿಳಿಸಿದರು.
ಇಂದು ವಿಧಾನಸಭೆಯಲ್ಲಿ ಮಳವಳ್ಳಿ ಶಾಸಕರಾದ ನರೇಂದ್ರಸ್ವಾಮಿ ಪಿ.ಎಂ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಈಗಾಗಲೇ ಕ್ರಿಯಾಯೋಜನೆಯನ್ನು ಸಿದ್ದಪಡಿಸಲಾಗಿದ್ದು, ನಂದಿಬೆಟ್ಟ, ಗಗನಚುಕ್ಕಿ, ಭರಚುಕ್ಕಿ ಸೇರಿದಂತೆ ವಿವಿಧ ಪ್ರವಾಸಿ ತಾಣಗಳನ್ನು ಅಭಿವೃಧ್ಧಿಪಡಿಸಲು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಪ್ರವಾಸೋದ್ಯಮ ನೀತಿಯನ್ನು ಜಾರಿಗೆ ತರಲಾಗುವುದು ಎಂದರು.Post a Comment
0Comments