ಸ್ವಾತಂತ್ರ್ಯ ಉದ್ಯಾನವನ ಅವರಣದಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟಗಳ ಸಂಘಟನೆಯಿಂದ ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರ ತೇಜೋವಧೆ ಖಂಡಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುತ್ತಿರುವ ಬಿಜೆಪಿ - ಜೆಡಿಎಸ್ ಕುತಂತ್ರಗಳನ್ನು ವಿರೋಧಿಸಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ರಾಜಭವನ ಚಲೋ ಪ್ರತಿಭಟನೆ.
*ಒಕ್ಕೂಟ ಅಧ್ಯಕ್ಷರಾದ ರಾಮಚಂದ್ರ, ರಾಮ್ ಮನೋಹರ್ ಲೋಹಿಯ ವಿಚಾರ ವೇದಿಕೆ ರಾಜ್ಯಾಧ್ಯಕ್ಷರಾದ ಬಿ.ಎಸ್.ಶಿವಣ್ಣ, ದಲಿತ ಸಂಘರ್ಷ ಸಮಿತಿ ಅಧ್ಯಕ್ಷರಾದ ಮಾವಳ್ಳಿ ಶಂಕರ್*, *ವಿಧಾನಪರಿಷತ್ ಸದಸ್ಯರಾದ ನಾಗರಾಜ್ ಯಾದವ್, ಮಾಜಿ ಮಹಾಪೌರರಾದ ಜೆ.ಹುಚ್ಚಪ್ಪ*, *ಮಂಜುನಾಥ್ ರೆಡ್ಜಿ, ಮಾಜಿ ಉಪಮಹಾಪೌರರಾದ ಎಲ್.ಶ್ರೀನಿವಾಸ್, ಮಾಜಿ ಆಡಳಿತ ಪಕ್ಷದ ನಾಯಕರುಗಳಾದ ಎಮ್.ಶಿವರಾಜು, ಉದಯಶಂಕರ್, ಸತ್ಯನಾರಾಯಣ್, ಜಯನಗರ ವಿಧಾನಸಭಾ ಕ್ಷೇತ್ರದ ಗ್ಯಾರೆಂಟಿ* *ಯೋಜನೆ ಆನುಷ್ಠಾನ ಸಮಿತಿ ಅಧ್ಯಕ್ಷರಾದ ಎನ್.ನಾಗರಾಜು, ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಜಿ.ಕೃಷ್ಣಮೂರ್ತಿ*,
*ಶಾಂತಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶಿವಕುಮಾರ್, ರಾಜಾಜಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಎನ್.ವೆಂಕಟೇಶ್, ರಾಜಾಜಿನಗರ ವಿಧಾನಸಭಾ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ರಾಧಕೃಷ್ಣ, ರವರು ಮತ್ತು ಸಂಗೊಳ್ಳಿ ರಾಯಣ್ಣ ಅಭಿಮಾನಿಗಳ ಬಳಗ ಅಧ್ಯಕ್ಷರಾದ ಮಂಜುನಾಥ್ ವಿ.ರಾಮಮೂರ್ತಿರವರು ರವರು ರಾಜ್ಯಾದ್ಯಂತ ಸಿದ್ದರಾಮಯ್ಯರವರ ಅಭಿಮಾನಿಗಳು ಕಾಂಗ್ರೆಸ್ ಪಕ್ಷದ ಮುಖಂಡರುಗಳು ಭಾಗವಹಿಸಿದ್ದರು*
ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಲ್ಲೋಟ್ ಅವರು ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುವಾಗ ಸಂವಿಧಾನದ ಮೂಲ ತತ್ವಗಳನ್ನು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿದ್ದಾರೆ. ರಾಜಭವನವನ್ನು ಕೋಮುವಾದಿ ರಾಜಕಾರಣ ಮಾಡುತ್ತಿರುವ ಬಿಜೆಪಿ ಮತ್ತು ಪ್ಯೂಡಲ್ ವಾದಿ ರಾಜಕಾರಣ ಮಾಡುತ್ತಿರುವ ಜೆಡಿಎಸ್ ಪಕ್ಷಗಳ ಕಛೇರಿಯನ್ನಾಗಿ ಪರಿವರ್ತಿಸಿಕೊಂಡಿದ್ದಾರೆ.
ರಾಜ್ಯಪಾಲರು ಬಿಜೆಪಿ-ಜೆಡಿಎಸ್ ಪಕ್ಷಗಳ ತಾಳಕ್ಕೆ ಕುಣಿಯುತ್ತಿರುವುದಷ್ಟೆ ಅಲ್ಲ ತೀವ್ರ ಪಕ್ಷಪಾತಿ ಧೋರಣೆಯನ್ನು ತಾಳಿದ್ದಾರೆ. ಜನರಿಂದ ಆಯ್ಕೆಯಾದ ಸರ್ಕಾರದ ಮುಖ್ಯಸ್ಥರಾಗಿರುವ ಮುಖ್ಯಮಂತ್ರಿಗಳ ವಿರುದ್ಧ ನಡೆಯುತ್ತಿರುವ ಪಿತೂರಿ-ಪಡ್ಯಂತ್ರಗಳ ಭಾಗವಾಗಿದ್ದಾರೆ. ಆ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವನ್ನು ದುಷ್ಟರು, ಭ್ರಷ್ಟರೂ ಆದ ಬಿಜೆಪಿ-ಜೆಡಿಎಸ್ ಪಕ್ಷಗಳ ಹಿತಾಸಕ್ತಿಗೆ ಅಡ ಇಟ್ಟಿದ್ದಾರೆ.
ಕರ್ನಾಟಕ ಲೋಕಾಯುಕ್ತ, ಎಸ್‌ಐಟಿ ಮುಂತಾದ ತನಿಖಾ ಸಂಸ್ಥೆಗಳು ಪ್ರಾಥಮಿಕ ತನಿಖೆಯಲ್ಲಿ ತಪ್ಪಿತಸ್ಥರು ಎಂದು ಸಾಬೀತಾದ ಪ್ರಮುಖ ಕುಮಾರಸ್ವಾಮಿಯವರ ಗಣಿ ಹಗರಣ, ಶಶಿಕಲಾ ಜೊಲ್ಲೆಯವರ ಮೊಟ್ಟೆ ಹಗರಣ, ಜನಾರ್ಧನ ರೆಡ್ಡಿಯವರ ಆದಾಯಕ್ಕೂ ಮಿತಿ ಮೀರಿದ ಆಸ್ತಿ ಗಳಿಕೆ, ನಿರಾಣಿಯವರ ಭ್ರಷ್ಟಾಚಾರಗಳ ಕುರಿತು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡಿ ಎಂದು ರಾಜಭವನಕ್ಕೆ ಕೋರಿಕೆ ಸಲ್ಲಿಸಿ ವರ್ಷಗಳಾದರೂ ಈ ರಾಜ್ಯಪಾಲರು ಈ ಕೋರಿಕೆಗಳನ್ನು ಕಸದ ಬುಟ್ಟಿಗೆ ಎಸೆದು ಪಕ್ಷಪಾತ ಮಾಡಿದ್ದಾರೆ. ಇದುವರೆಗೆ ಒಬ್ಬರ ಮೇಲೂ ವಿಚಾರಣೆಗೆ ಅನುಮತಿ ನೀಡಿಲ್ಲ.
ಆದರೆ ಬ್ಲಾಕ್ ಮೇಲರುಗಳು, ಕ್ರಿಮಿನಲ್ ಕೇಸುಗಳು ಬಾಕಿ ಇರುವ ಆರೋಪಿಗಳು ಕೊಟ್ಟ ದೂರು-ಅರ್ಜಿಗಳನ್ನು ಸರಿಯಾಗಿ ಪರಿಶೀಲನೆ ಕೂಡ ಮಾಡದೆ ದೂರರ್ಜಿ ಸ್ವೀಕರಿಸಿದ ದಿನವೇ ಕೆಲವೇ ಗಂಟೆಗಳಲ್ಲಿ ಮಾನ್ಯ ಮುಖ್ಯಮಂತ್ರಿಗಳಿಗೆ ಕಾರಣ ಕೇಳುವ ನೋಟೀಸು ನೀಡಿರುತ್ತಾರೆ. ದೂರದಾರರ ಅರ್ಜಿ ಬರೀ ಸುಳ್ಳುಗಳಿಂದ ಕೂಡಿದೆ. ರಾಜ್ಯಪಾಲರು ನೀಡಿರುವ ನೋಟಿಸ್ ದೋಷಪೂರಿತ ಎಂದು ಇಡೀ ಸಚಿವ ಸಂಪುಟ ಚರ್ಚೆ ಮಾಡಿ ನೋಟೀಸನ್ನು ಕೂಡಲೆ ಹಿಂಪಡೆಯುವಂತೆ ನಿರ್ಣಯ ಮಾಡಿ ರಾಜಭವನಕ್ಕೆ ಕಳುಹಿಸಿ ಕೊಟ್ಟಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳು ಸಹ ದೀರ್ಘವಾದ ಪ್ರತಿಕ್ರಿಯೆಯನ್ನು ಕಳುಹಿಸಿ ಕೊಟ್ಟಿದ್ದಾರೆ. ಇದ್ಯಾವುದನ್ನೂ ಪರಿಗಣಿಸದ ಈ ರಾಜ್ಯಪಾಲರು ಮಾನ್ಯ ಮುಖ್ಯಮಂತ್ರಿ ಶ್ರೀಯುತ ಶ್ರೀ ಸಿದ್ದರಾಮಯ್ಯನವರಿಗೆ ಕಿರುಕುಳ ನೀಡಬೇಕೆಂದು ತೀರ್ಮಾನಿಸಿದ್ದಾರೆ.
ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಮುಡಾ ವಿಚಾರದಲ್ಲಿ ಒಂದು ಸೂಜಿ ಮೊನೆಯಷ್ಟೂ ತಪ್ಪು ಮಾಡಿಲ್ಲವೆಂದು ಇಡೀ ರಾಜ್ಯದ ಜನರು ಹೇಳುತ್ತಿದ್ದಾರೆ ಹಾಗೂ ಸರ್ಕಾರಿ ದಾಖಲೆ ಹೇಳುತ್ತಿದೆ.
ಆದರೆ ರಾಜಕೀಯ ದುರುದ್ದೇಶದಿಂದ ಬಿಜೆಪಿ-ಜೆಡಿಎಸ್‌ಗಳು ಮಾನ್ಯ ಶ್ರೀ ಸಿದ್ದರಾಮಯ್ಯನವರನ್ನು ತೇಜೋವಧೆ ಮಾಡುತ್ತಲೇ ಹೊರಟಿದ್ದಾರೆ.
ಇತ್ತೀಚೆಗೆ ಪ್ರಕರಣದ ವಿಚಾರಣೆಯಾಗಿ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರು, ಮುಖ್ಯಮಂತ್ರಿಗಳು ತಪ್ಪು ಮಾಡಿದ್ದಾರಾ? ಯಾವುದಾದರೂ ದಾಖಲೆಗಳು ಇವೆಯಾ? ಎಂದು ಕೇಳಿದಾಗ ವಿರೋಧಿಗಳ ಬಳಿ ಉತ್ತರವೇ ಇರಲಿಲ್ಲ.
ಉಚ್ಚ ನ್ಯಾಯಾಲಯವು ನೀಡಿರುವ ಮಧ್ಯಂತರ ತೀರ್ಪಿನಲ್ಲಿ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಗೆ ಅನುಮತಿಯು "Impugned sanction" ಎಂದು ನಮೂದಿಸಲಾಗಿದೆ. ಅಷ್ಟರ ಮಟ್ಟಿಗೆ ರಾಜ್ಯಪಾಲರಿಗೆ ಮುಖಭಂಗವಾಗಿದೆ ಅಲ್ಲವೇ?
ಬಿಜೆಪಿ-ಜೆಡಿಎಸ್ ಮತ್ತು ಕೋಮುವಾದಿ, ಜಾತಿವಾದಿ ದುಷ್ಟರೆಲ್ಲಾ ಸೇರಿಕೊಂಡು ಶೋಷಿತ ಸಮುದಾಯಗಳ ಚೈತನ್ಯವನ್ನು ತುಳಿದು ಹಾಕಬೇಕೆಂದು ನಿರ್ಧಾರ ಮಾಡಿವೆ. ಇವರು ಬಡವರ ಪರ ಗ್ಯಾರಂಟಿ ಯೋಜನೆಗಳ ವಿರುದ್ಧ ಇದ್ದಾರೆ. ಆಪರೇಷನ್ ಕಮಲ ಮಾಡಲು ಪ್ರಯತ್ನಿಸಿ ಸೋತು ಹಿಂಬಾಗಿಲ ಮೂಲಕ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿದ್ದಾರೆ. ಅದರ ಭಾಗವಾಗಿಯೆ ನಮ್ಮ ಮಾನ್ಯ ಮುಖ್ಯಮಂತ್ರಿಗಳ ಮೇಲೆ ದಾಳಿ ಪ್ರಾರಂಭಿಸಿದ್ದಾರೆ.
ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿ ಬಹುಮತದ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ಈ ತಕ್ಷಣವೇ ನಿಲ್ಲಿಸಬೇಕು. ಸಂವಿಧಾನ ಮತ್ತು ಒಕ್ಕೂಟ ತತ್ವದ ವಿರೋಧಿಯಾದ ರಾಜ್ಯಪಾಲರನ್ನು ಮೋದಿ ಸರ್ಕಾರ ಕೂಡಲೆ ವಾಪಸ್ಸು ಕರೆಸಿಕೊಳ್ಳಬೇಕು. ಮಾನ್ಯ ಶ್ರೀ ಸಿದ್ದರಾಮಯ್ಯರವರ ಪ್ರಾಸಿಕ್ಯೂಷನ್ ಅನುಮತಿ ಹಿಂಪಡೆಯಬೇಕು, ಪ್ರಜಾಪ್ರಭುತ್ವ ಒಕ್ಕೂಟದ ವ್ಯವಸ್ಥೆ ಮತ್ತು ರಾಜ್ಯ ಸರ್ಕಾರದ ಸಾರ್ವಭೌಮತೆಯನ್ನು ಸಂರಕ್ಷಿಸಬೇಕು. ಕನ್ನಡ ನಾಡಿನ ಘನತೆಯನ್ನು ಕಾಪಾಡಬೇಕೆಂದು ಆಗ್ರಹಿಸಿ ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ ಮತ್ತು ಸ್ವಾಭಿಮಾನದ ಸಂರಕ್ಷಣೆಗಾಗಿ ಹೋರಾಟ.