ಪತ್ರಕರ್ತರ ನಿಯೋಗಕ್ಕೆ ಸಚಿವ ಶರಣ ಪಾಟೀಲ್ ಭರವಸೆ , ಪತ್ರಕರ್ತರಿಗಾಗಿಯೇ ಉಚಿತ ಆರೋಗ್ಯ ತಪಾಸಣಾ ಶಿಬಿರ

varthajala
0

 ಬೆಂಗಳೂರು: ಪತ್ರಕರ್ತರಿಗಾಗಿಯೇ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ಭೇಟಿ ಮಾಡಿದ್ದ ನಿಯೋಗದ ಮನವಿಗೆ ಕೂಡಲೇ ಸ್ಪಂಧಿಸಿದ ಅವರು, ಮೊದಲ ಹಂತದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ಸಹಯೋಗದಲ್ಲಿ ಬೆಂಗಳೂರು, ಕಲಬುರಗಿ ಮತ್ತು ಮೈಸೂರಿನಲ್ಲಿ ಶಿಬಿರ ನಡೆಸಲು ಸೂಚಿಸುವುದಾಗಿ ತಿಳಿಸಿದರು.

ಸೂಪರ್ ಸ್ಟೆಷಾಲಿಟಿ ಆಸ್ಪತ್ರೆಗಳಲ್ಲಿ ಆದ್ಯತೆ ಮೇರೆಗೆ ಪತ್ರಕರ್ತರಿಗೆ ಪ್ರತ್ಯೇಕ ಕೊಠಡಿಯನ್ನು ಆದ್ಯತೆ ಮೇಲೆ ಕಾಯ್ದಿರಿಸಿ ಚಿಕಿತ್ಸೆ ನೀಡುವ ವ್ಯವಸ್ಥೆ ಆಗಬೇಕು ಎನ್ನುವ ಪತ್ರಕರ್ತರ ಸಂಘದ ಬೇಡಿಕೆಯನ್ನು ಪರಿಗಣಿಸಲಾಗುವುದು. ಈ ಬಗ್ಗೆ ಆಸ್ಪತ್ರೆಯ ಮುಖ್ಯಸ್ಥರಿಗೆ ಸೂಚನೆ ನೀಡಲಾಗುವುದು ಎಂದರು.

ಯಶಸ್ವಿನಿ ಯೋಜನೆ ವ್ಯಾಪ್ತಿಯಲ್ಲಿಯೇ ಪತ್ರಕರ್ತರನ್ನು ಸೇರ್ಪಡೆಯಾದರೆ ಸಾಕಷ್ಟು ಅನುಕೂಲವಾಗಲಿದೆ. ಪತ್ರಕರ್ತರಿಗಾಗಿಯೇ ಪ್ರತ್ಯೇಕ ಆರೋಗ್ಯ ಯೋಜನೆ ಮಾಡಿದರೂ ಉತ್ತಮ. ಈ ಬಗ್ಗೆ ತಮ್ಮ ಬೇಡಿಕೆ ಬಗ್ಗೆ ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ಮಾಡುವುದಾಗಿ ತಿಳಿಸಿದರು.
                            
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪತ್ರಕರ್ತರು, ಪೋಟೋಗ್ರಾರ್ಸ್‌, ವಿಡಿಯೋ ಜರ್ನಲಿಸ್ಟ್ ಸೇರಿದಂತೆ ಒತ್ತಡದಲ್ಲಿ ಬದುಕುತ್ತಿರುವ ಪತ್ರಕರ್ತರಿಗೆ ಆರೋಗ್ಯ ಸಮಸ್ಯೆ ಬಂದಾಗ ತಕ್ಷಣವೇ ಸ್ಪಂಧಿಸಿ ಚಿಕಿತ್ಸೆ ನೀಡುವ ವ್ಯವಸ್ಥೆ ಸೂಪರ್ ಸ್ಟೆಷಾಲಿಟಿ ಆಸ್ಪತ್ರೆಗಳಲ್ಲಿ ಮಾಡಬೇಕು ಎಂದು ಮನವಿ ಮಾಡಿದರು.
ನಿಯೋಗದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಉಪಾಧ್ಯಕ್ಷರುಗಳಾದ ಅಜ್ಜಮಾಡ ರಮೇಶ್ ಕುಟ್ಟಪ್ಪ, ಭವಾನಿಸಿಂಗ್ ಠಾಕೂರ್, ಪುಂಡಲೀಕ ಬಾಳೋಜಿ, ಕಾರ್ಯದರ್ಶಿಗಳಾದ ಸೋಮಶೇಖರ ಕೆರಗೋಡು, ಖಜಾಂಚಿ ವಾಸುದೇವ ಹೊಳ್ಳ, ಶರಣ ಬಸಪ್ಪ, ಸಚಿವರ ಮಾಧ್ಯಮ ಸಂಯೋಜಕ ಅನಿಲ್ ಕುಮಾರ್ ಹಾಜರಿದ್ದರು.
                          
 
With Warm Regard

Shivananda Tagaduru

8884431995, 9845087374

Post a Comment

0Comments

Post a Comment (0)