ಸಮಾಜದಲ್ಲಿ ವೆಲ್‌ನೆಸ್‌ ಹೆಚ್ಚಿಸಲು ಸೇವಾ ಮನೋಭಾವ ಹೊಂದಿರುವ ವೈದ್ಯರುಗಳ ಸೇವೆ ಅಗತ್ಯ

varthajala
0

 ಬೆಂಗಳೂರು: ಆರೋಗ್ಯ ಕ್ಷೇತ್ರ ವ್ಯಾಪಾರೀಕರಣವಾಗುತ್ತಿರುವ ಈ ಸಂಧರ್ಭದಲ್ಲಿ ಸಮಾಜದಲ್ಲಿ ವೆಲ್‌ನೆಸ್‌ ಹೆಚ್ಚಿಸಲು ಸೇವಾ ಮನೋಭಾವ ಹೊಂದಿರುವ ವೈದ್ಯರುಗಳ ಸೇವೆ ಅಗತ್ಯ ಹೆಚ್ಚಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು. ಇಂದು ನಗರದ ಕನಕಪುರ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ "ಧೀ" 207 ಬೆಡ್ ಗಳ ಸುಪರ್‌ಸ್ಪೇಷಾಲಿಟಿ ಆಸ್ಪತ್ರೆಯ ಲೋಕಾರ್ಪಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

 

ಆರೋಗ್ಯ ಕ್ಷೇತ್ರದಲ್ಲಿ ಸೇವಾ ಮನೋಭಾವನೆ ಇರಬೇಕು. ನಮ್ಮಲ್ಲಿ ಜಯದೇವಕಿದ್ವಾಯಿಯಂತಹ ಅತ್ಯುತ್ತಮ ಆಸ್ಪತ್ರೆಗಳಿವೆ. ಆರೋಗ್ಯ ರಕ್ಷಣೆಯಲ್ಲಿ ಸರ್ಕಾರದ ಜವಾಬ್ದಾರಿ ಹೆಚ್ಚಿದ್ದುಆರೋಗ್ಯವಂತ ಸಮಾಜ ನಿರ್ಮಿಸುವುದು ನಮ್ಮ ಗುರಿಯಾಗಿದೆ. ಇದನ್ನ ಸರಕಾರದಿಂದ ಮಾತ್ರ ಸಾಧಿಸಲು ಸಾಧ್ಯವಿಲ್ಲ. ಇದಕ್ಕೆ ಸೇವಾ ಮನೋಭಾವ ಹೊಂದಿರುವಂತಹ "ಧೀ" ಯಂತಹ ಖಾಸಗಿ ಆಸ್ಪತ್ರೆಗಳ ಪಾತ್ರವೂ ಪ್ರಮುಖವಾಗಿದೆ. ರೋಗವನ್ನು ಉಪಚರಿಸುವುದಕ್ಕಿಂತಾ ರೋಗ ಬರದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ನಮ್ಮ ಆದ್ಯತೆಯಾಗಿದೆ. ರೋಟರಿವ್ಯಾಸ ಹೀಗೆ ಹಲವರು ಸ್ವಯಂ ಸೇವಾ ಸಂಸ್ಥೆಗಳ ಜೊತೆಗೂಡಿ ಸಮಾಜದ ಅಶಕ್ತ ಹಾಗೂ ಆರ್ಥಿಕವಾಗಿ ದುರ್ಬಲವಾಗಿರುವ ಜನರ ಆರೋಗ್ಯ ಕಾಪಾಡಲು ಮುಂದಾಗಿರುವ ಡಾ. ಚಂದ್ರಶೇಖರ್‌ ಮುನಿಯಪ್ಪ ಅವರ ಕಾರ್ಯ ಶ್ಲಾಘನೀಯ. ಆರೋಗ್ಯ ಕ್ಷೇತ್ರ ವಾಣೀಜ್ಯೀಕರಣವಾಗುತ್ತಿದೆ. ಇಂತಹ ಸಂಧರ್ಭದಲ್ಲಿ ಸೇವೆಯ ಮನೋಭಾವನೆ ಹಾಗೂ ಕೈಗೆಟಕುವ ದರದಲ್ಲಿ ಉತ್ತಮ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ವೈದ್ಯರೇ ಸ್ಥಾಪಿಸಿದ ಆಸ್ಪತ್ರೆಗಳ ಅಗತ್ಯತೆ ಹೆಚ್ಚಾಗಿದೆ. ಸೇವಾ ಮನೋಭಾವನೆ ಇಲ್ಲದೇ ಇದ್ದಲ್ಲಿ ಉತ್ತಮ ವೈದ್ಯರು ಆಗಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

                                       

 

ಹೃದಯಜ್ಯೋತಿ ಯೋಜನೆಯಿಂದಾಗಿ ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆದು ಪ್ರಾಣ ಉಳಿಸಿಕೊಳ್ಳುತ್ತಿದ್ದಾರೆ. ಇದುವರೆಗೂ ಸುಮಾರು 20 ಕ್ಕೂ ಹೆಚ್ಚು ಜನರು ಪ್ರಾಣಾಪಾಯದಿಂದ ಪಾರಾಗಿದ್ದುಈ ಯೋಜನೆಯನ್ನು ರಾಜ್ಯದ ಎಲ್ಲಾ ತಾಲ್ಲೂಕುಗಳಿಗೂ ವಿಸ್ತರಿಸಲಿದ್ದೇವೆ ಎಂದು ಹೇಳಿದರು.

                                  

 

ಗುರುದೇವ್ ರವಿಶಂಕರ್ ಗುರೂಜಿ ಮಾತನಾಡಿ , ಆರೋಗ್ಯವಂತ ಸಮಾಜ ನಿರ್ಮಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಉತ್ತಮ ಶಿಕ್ಷಣ ಇದ್ದರೆ ಆರೋಗ್ಯದೇಶದ ಬೆಳವಣಿಗೆಗೆ ಸಹಕಾರಿಯಾಗಲಿದೆ. ಮನಸ್ಸುದೇಹಶರೀರಜೀವನ ಶೈಲಿನಡೆನುಡಿಯಿಂದ ಆರೋಗ್ಯ ಕಾಪಾಡಿಕೊಳ್ಳಬೇಕು. ಮುನ್ನೆಚ್ಚರಿಕೆ ತೆಗೆದುಕೊಂಡರೆ ರೋಗ ತಡೆಗಟ್ಟಬಹುದು. ದೇವರನ್ನು ನೋಡಲು ದೇವಸ್ಥಾನಕ್ಕೆ ಹೋಗಬೇಕಾಗಿಲ್ಲ. ಆಸ್ಪತ್ರೆಯಲ್ಲಿರುವ ವೈದ್ಯರು ನಿಜವಾದ ದೇವರು. ಸೇವಾ ಮನೋಭಾವದಿಂದ ಎಲ್ಲರಿಗೂ ಉತ್ತಮ ಚಿಕಿತ್ಸೆಯನ್ನು ಕಡಿಮೆ ದರದಲ್ಲಿ ಒದಗಿಸುವ ಗುರಿಯನ್ನು ಇಟ್ಟುಕೊಂಡು ಪ್ರಾರಂಭವಾಗಿರುವ ಈ ಆಸ್ಪತ್ರೆಗೆ ಯಶಸ್ಸು ಸಿಗಲಿ ಎಂದು ಹಾರೈಸಿದರು.

                                  

ಆಸ್ಪತ್ರೆಯ ಸಿಇಒ ಡಾ. ಚಂದ್ರಶೇಖರ್ ಚಿಕ್ಕಮುನಿಯಪ್ಪ ಮಾತನಾಡಿ , ಸಮಾಜದ ಆರೋಗ್ಯಕ್ಕಾಗಿ ವೈದ್ಯರು ದೊಡ್ಡ ಪಾತ್ರ ನಿರ್ವಹಿಸಲಿದ್ದಾರೆ. ಜನರ ರಕ್ಷಣೆಗೆ ವೈದ್ಯಕೀಯ ಸಮೂಹ ನಿರಂತರವಾಗಿ ಶ್ರಮಿಸುತ್ತಿದೆ. ಆರೋಗ್ಯ ರಕ್ಷಣೆಗೆ ಸರ್ಕಾರದ ಜೊತೆ ಖಾಸಗಿ ವಲಯದ ಪಾತ್ರ ಮಹತ್ವದ್ದಾಗಿದೆ. ಸಮಾನ ಮನಸ್ಕ ವೈದ್ಯರು ಜೊತೆಗೂಡಿ ಈ ಆಸ್ಪತ್ರೆಯನ್ನು ಪ್ರಾರಂಭಿಸಿದ್ದೇವೆ. ರೋಗಿಗಳಿಗೆ ಕೈಗೆಟಕುವ ದರದಲ್ಲಿ ಅತ್ಯುತ್ತಮ ಸೇವೆಯನ್ನು ನೀಡುವುದು ನಮ್ಮ ಗುರಿಯಾಗಿದೆ. ರೋಟರಿ ಸಂಸ್ಥೆವ್ಯಾಸ ಸಂಸ್ಥೆಯ ಜೊತೆಗೂಡಿ ಈಗಾಗಲೇ ಹಲವಾರು ಜನೋಪಯೋಗಿ ಕಾರ್ಯಗಳಲ್ಲಿ ತೊಡಗಿಕೊಂಡಿದ್ದೇವೆ ಎಂದು ಹೇಳಿದರು.

                                    

 

ಶಿಕ್ಷಣ ತಜ್ಞ ಡಾ. ಗುರುರಾಜ್ ಕರಜಗಿರೋಟರಿ ಫೌಂಡೇಶನ್‌ ನ ಏಷ್ಯಾದ ರಾಯಭಾರಿ ಹಾಗೂ ಮಹಾದಾನಿ ರವಿಶಂಕರ್ ದಕೋಜು ಮತ್ತಿತರರು ಉಪಸ್ಥಿತರಿದ್ದರು.


Post a Comment

0Comments

Post a Comment (0)