ಬೆಳಗಾವಿ, / ಬೆಂಗಳೂರು , (ಕರ್ನಾಟಕ ವಾರ್ತೆ): ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಗೋಕಾಕ ನಗರದ ವಿವಿಧ ಪ್ರದೇಶಗಳು ಮತ್ತು ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ರಸ್ತೆ ಮರ‍್ಗವಾಗಿ ಗೋಕಾಕ ನಗರಕ್ಕೆ ಆಗಮಿಸಿದರು.
ಅತಿವೃಷ್ಟಿಯಿಂದ ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯನ್ನು ವೀಕ್ಷಿಸಿದರು.
ಈ ಸಂರ‍್ಭದಲ್ಲಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರು, ಹೊಸ ಸೇತುವೆ ನರ‍್ಮಾಣಕ್ಕೆ ಮನವಿ ಮಾಡಿದರು.
ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ, ವಿಧಾನಪರಿಷತ್ ಸದಸ್ಯರಾದ ಲಖನ್ ಜಾರಕಿಹೊಳಿ ಮತ್ತಿತರರು ಉಪಸ್ಥಿತರಿದ್ದರು.
ಇದಾದ ಬಳಿಕ ಲೋಳಸೂರ ಸೇತುವೆಯ ಬಳಿ ಹಿನ್ನೀರಿನಿಂದ ಒಂದು ವಾರದಿಂದ ಮುಳುಗಡೆಯಾಗಿದ್ದ ಗೋಕಾಕನಗರದ ಹಳೆ ದನಗಳ ಪೇಟೆ, ಮಟನ್ ಮರ‍್ಕೆಟ್, ಕುಂಬಾರಗಲ್ಲಿ, ಉಪ್ಪಾರಗಲ್ಲಿ, ಭೋಜಗಾರ ಗಲ್ಲಿ ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು, ಮಳೆಯಿಂದ ಉಂಟಾಗಿರುವ ಹಾನಿಯನ್ನು ವಿವರಿಸಿದರು.
ಸಂಕೇಶ್ವರ-ಯರಗಟ್ಟಿ ರಾಜ್ಯ ಹೆದ್ದಾರಿಯಲ್ಲಿರುವ ಲೋಳಸೂರ ಸೇತುವೆ ತುಂಬಾ ಹಳೆಯದಾಗಿದ್ದು, ಪ್ರತಿರ‍್ಷ ಮಳೆಗಾಲದಲ್ಲಿ ಮುಳುಗಡೆಯಾಗುತ್ತಿರುವುದರಿಂದ ಸರ‍್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ಎತ್ತರದ ಲೋಳಸೂರ ಸೇತುವೆಯ ನರ‍್ಮಿಸುವ ಅಗತ್ಯವಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಿಗೆ ವಿವರಿಸಿದರು.