ನವದೆಹಲಿ / ಬೆಂಗಳೂರು (ಕರ್ನಾಟಕ ವಾರ್ತೆ):
ನವದೆಹಲಿಯಲ್ಲಿ ನಿರ್ಮಾಣ ಹಂತದಲ್ಲಿರುವ ಕರ್ನಾಟಕ ಭವನದ ನೂತನ ಕಟ್ಟಡಕ್ಕೆ ಭೇಟಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭವನದ ಅಂತಿಮ ಕಾಮಗಾರಿ ಪರಿಶೀಲನೆ ನಡೆಸಿ, ನಿಗದಿತ ಸಮಯದೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸಂಬAಧಿತ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.