ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿಹೆಚ್.ಡಿ. ಸಂಶೋಧನೆಗೆ - ಕರ್ನಾಟಕ ಡಿ.ಎಸ್.ಟಿ-ಪಿಹೆಚ್.ಡಿ. ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

varthajala
0 minute read
0

 ಬೆಂಗಳೂರು , (ಕರ್ನಾಟಕ ವಾರ್ತೆ): ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿ.ಎಸ್.ಟಿ.) "ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ.ಹೆಚ್.ಡಿ. ಸಂಶೋಧನೆಗೆ ಕರ್ನಾಟಕ ಡಿ.ಎಸ್.ಟಿ.ಪಿಹೆಚ್.ಡಿ ಶಿಷ್ಯವೇತನ" ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪೆÇ್ರೀತ್ಸಾಹಕ ಸೊಸೈಟಿಯ ಮುಖಾಂತರ ಅನುಷ್ಟಾನಗೊಳಿಸುತ್ತಿದೆ2024-25ನೇ ಸಾಲಿನಲ್ಲಿ ಸದರಿ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆ/ ಕಾಲೇಜುಗಳಲ್ಲಿ ಈಗಾಗಲೇ ಪಿಹೆಚ್.ಡಿ. ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‍ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ ಸೆಪ್ಟೆಂಬರ್ 30, 2024 (ಸಂಜೆ 5.00 ಗಂಟೆ) ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಸಲ್ಲಿಸಲು ವೆಬ್‍ಸೈಟ್ http://ksteps.karnataka.gov.in ನ್ನು ನೋಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Post a Comment

0Comments

Post a Comment (0)
Today | 18, March 2025