ಬೆಂಗಳೂರು, (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರವು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ನಡೆಸಲಿರುವ ಕೆ-ಸೆಟ್ ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸುವ ಯುಜಿಸಿ-ನೆಟ್ ಮತ್ತು ಕಿರಿಯ ಶಿಷ್ಯವೇತನ ಸಂಶೋಧನ ಸಹಾಯಕರ (ಜೆಆರ್‍ಎಫ್) ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ.
ಆಸಕ್ತರು ಆಗಸ್ಟ್ 09 ರೊಳಗಾಗಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.
ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‍ಸೈಟ್ www.ksoumysuru.ac.in ಮತ್ತು ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26 ಕಛೇರಿ ದೂರವಾಣಿ ಸಂಖ್ಯೆ: 080-26603664 ಹಾಗೂ 98449-65515ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವÀ ಪ್ರೊ. ಕೆ.ಬಿ. ಪ್ರವೀಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.