ಬೆಂಗಳೂರು (ಕರ್ನಾಟಕ ವಾರ್ತೆ):
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಆಗಸ್ಟ್ 03 ರಂದು ಬೆಳಿಗ್ಗೆ 10 ಗಂಟೆಗೆ ಬೆಳಗಾವಿಯ ಜವಹರಲಾಲ್ ನೆಹರು ಮೆಡಿಕಲ್ ಕಾಲೇಜಿನ ಡಾ. ಬಿ.ಎಸ್. ಜಿರ್ಗೆ ಸಭಾಂಗಣದಲ್ಲಿ “ಭಾರತೀಯ ಅಂಗಾಂಗ ದಾನ ದಿನ” ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ರಾಜ್ಯಮಟ್ಟದ ಕಾರ್ಯಕ್ರಮವಾಗಿದ್ದು, ಕಾರ್ಯಕ್ರವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು / ಶಾಸಕರು ಇತರೆ ಸಚಿವರುಗಳು / ಗಣ್ಯ ವ್ಯಕ್ತಿಗಳು, ಇಲಾಖೆಯ ಮೇಲಾಧಿಕಾರಿಗಳು / ಧರ್ಮ ಗುರುಗಳು / ಅಧಿಕಾರಿಗಳು ಪಾಲ್ಗೊಂಡು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಅಂಗಾಂಗ ದಾನ ಮಾಡಿದ ಕುಟುಂಬದ ಸದಸ್ಯರಿಗೆ ಗೌರವಾರ್ಪಣೆ ಸಹ ಏರ್ಪಡಿಸಲಾಗಿದೆ ಎಂದು ಬೆಂಗಳುರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಸಹ ನಿರ್ದೇಶಕರು ಹಾಗೂ ಸದಸ್ಯ ಕಾರ್ಯದರ್ಶಿಗಳು ಜೀವಸಾರ್ಥಕತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.