ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಸಿಬ್ಬಂದಿಗಳಿಗೆ ನೀಡುವ ‘ಶ್ರೀಮತಿ ಎಸ್.ರಮಾದೇವಿ ವಿಶ್ವೇಶ್ವರಯ್ಯ ದತ್ತಿ ಪ್ರಶಸ್ತಿ’ಗೆ ದಯಾನಂದ ಮೂರ್ತಿಯವರನ್ನು ಮತ್ತು ‘ಶ್ರೀಮತಿ ವಿ.ಗೌರಮ್ಮ ಗಂಗಾಧರಯ್ಯ ಮಕ್ಕಳ ಸಿಬ್ಬಂದಿ ಸೇವಾ ಪ್ರಶಸ್ತಿ’ಗೆ ಎಂ.ಎನ್.ಸತೀಶ್ ಕುಮಾರ್ ಅವರನ್ನೂ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ.ಡಾ.ಮಹೇಶ ಜೋಶಿಯವರು ತಿಳಿಸಿದ್ದಾರೆ.
ಎಸ್.ರಮಾದೇವಿ ವಿಶ್ವೇಶ್ವರಯ್ಯನವರೂ ಕನಿಷ್ಟ ಹತ್ತು ವರ್ಷ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಸಿಬ್ಬಂದಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲು ‘ಶ್ರೀಮತಿ ಎಸ್.ರಮಾದೇವಿ ವಿಶ್ವೇಶ್ವರಯ್ಯ ಪ್ರಶಸ್ತಿ’ ಸ್ಥಾಪಿಸಿರುತ್ತಾರೆ. ಅದರಂತೆ ಡಾ.ಎಂ.ಜಿ.ನಾಗರಾಜ್ ಅವರು ಕನಿಷ್ಟ ಹತ್ತು ವರ್ಷ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಿಷ್ಟೆಯಿಂದ ಸೇವೆ ಸಲ್ಲಿಸಿದ ಪ್ರಾಮಾಣಿಕ ಸಿಬ್ಬಂದಿಯೊಬ್ಬರಿಗೆ ಪ್ರಶಸ್ತಿ ನೀಡಿ ಸನ್ಮಾನಿಸ ಬೇಕೆಂದು ‘ಶ್ರೀಮತಿ ವಿ.ಗೌರಮ್ಮ ಗಂಗಾಧರಯ್ಯ ಮಕ್ಕಳ ಸಿಬ್ಬಂದಿ ಸೇವಾ ಪ್ರಶಸ್ತಿ’ ಯನ್ನು ಸ್ಥಾಪಿಸಿರುತ್ತಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಡಾ.ಪದ್ಮಿನಿ ನಾಗರಾಜು, ನೇ.ಭ.ರಾಮಲಿಂಗ ಶೆಟ್ಟಿ, ಗೌರವ ಕೋಶಾಧ್ಯಕ್ಷರಾದ ಬಿ.ಎಂ.ಪಟೇಲ್ ಪಾಂಡು ಭಾಗವಹಿಸಿ ಸಿಬ್ಬಂದಿಗಳ ಸೇವೆಯ ಕಾರ್ಯ ವೈಖರಿ ಮತ್ತು ಪ್ರಾಮಾಣಿಕತೆ ಗುರುತಿಸಿ ಈ ಆಯ್ಕೆಯನ್ನು ಮಾಡಿರುತ್ತಾರೆ.
ಎನ್.ಎಸ್.ಶ್ರೀಧರ ಮೂರ್ತಿ
ಸಂಚಾಲಕರು ಪ್ರಕಟಣಾ ವಿಭಾಗ, ಕನ್ನಡ ಸಾಹಿತ್ಯ ಪರಿಷತ್ತು