ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಇತ್ತೀಚೆಗೆ ಜರುಗಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀಮತಿ ರಂಜಿತಾ ನಿರ್ದೇಶನದಲ್ಲಿ ಸೃಷ್ಟಿ ಕಲಾ ಕೇಂದ್ರದ ವಿದ್ಯಾರ್ಥಿಗಳು ಭರತನಾಟ್ಯ ಪ್ರದರ್ಶನ ನೀಡಿದರು.