ಬೆಂಗಳೂರು, ಅಕ್ಟೋಬರ್ 29 (ಕರ್ನಾಟಕ ವಾರ್ತೆ) : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ಅಂಗವಾಗಿ “ವಿಜ್ಞಾನ ಮತ್ತು ತಂತ್ರಜ್ಞಾನ ಚಾಲಿತ ವಿಶ್ವದಲ್ಲಿ ಗಾಂಧಿ ತತ್ವ ಸಿದ್ದಾಂತಗಳ ಮಹತ್ವ”ದ ಬಗ್ಗೆ ವಿಶ್ಲೇಷಿಸಿ ಪ್ರಬಂಧವನ್ನು ಬರೆಯಲು ಅನುಕೂಲವಾಗುವಂತೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮತ್ತು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಜಿಲ್ಲಾ ಮಟ್ಟದ ಸ್ಪರ್ಧೆಗೆ ಪ್ರಬಂಧಗಳನ್ನು ಬರೆದು ಕಳುಹಿಸಲು ನೀಡಲಾಗಿದ್ದ ಕೊನೆಯ ದಿನಾಂಕವನ್ನು ವಿದ್ಯಾರ್ಥಿಗಳ ಮನವಿ ಮೇರೆಗೆ ನವೆಂಬರ್ 04ರ ವರೆಗೆ ವಿಸ್ತರಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಪ್ರಬಂಧಗಳನ್ನು ಅಕಾಡೆಮಿಯ ಇ-ಮೇಲ್ ವಿಳಾಸ kstaessay.kannada@gmail.com ಗೆ ಕಳುಹಿಸಿಕೊಡಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ಚಂದ್ರಶೇಖರಮೂರ್ತಿ.ಎಸ್. ಮೊಬೈಲ್ ದೂರವಾಣಿ ಸಂ. 9686449019 / 9686919019 ಅಥವಾ ದೂರವಾಣಿ ಸಂಖ್ಯೆ 080-29721550 ಅಥವಾ ಅಕಾಡೆಮಿಯ ಜಾಲತಾಣ www.kstacademy.in ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎ.ಎಂ. ರಮೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.