ಚನ್ನಪಟ್ಟಣ ಉಪ ಚುನಾವಣೆ: ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿಯವರಿಂದ ಸಿ..ಪಿ.ಯೋಗೇಶ್ವರ್ ಪರ ಪ್ರಚಾರ

varthajala
0

ಚನ್ನಪಟ್ಟಣ: ಸಾರಿಗೆ ಮತ್ತು ಮುಜರಾಯಿ ಇಲಾಖೆ  ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ  ರಾಮಲಿಂಗಾರೆಡ್ಡಿ ರವರು ಇಂದು ಮತಯಾಚನೆ ಮಾಡಿದರು.

 ಮಾಜಿ ಲೋಕಸಭಾ ಸದಸ್ಯರಾದ ಡಿ.ಕೆ..ಸುರೇಶ್ ರವರು, ಕೆಪಿಸಿಸಿ ಉಪಾಧ್ಯಕ್ಷರಾದ   ಕೃಷ್ಣಂ ರಾಜು,, ಬಿಎಂಐಸಿ ಅಧ್ಯಕ್ಷರಾದ ರಘುನಂದನ್ ರಾಮಣ್ಣ  ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಮನೋಹರ್, ಬಿಬಿಎಂಪಿ ಮಾಜಿ ಸದಸ್ಯರಾದ ನಾಗರಾಜು, ಜಿ ಮಂಜುನಾಥ್ ರವರು ಕಾಂಗ್ರೆಸ್ ಪಕ್ಷದ ಮುಖಂಡರಾದ ಎಂ.ಎ. 

ಸಲೀಂ,ಎ.ಆನಂದ್, ಚಂದ್ರಶೇಖರ್ ಹಾಗೂ ಸ್ಥಳೀಯ ಮುಖಂಡರು ಚುನಾವಣೆ ಪ್ರಚಾರದಲ್ಲಿ ಭಾಗವಹಿಸಿದ್ದರು,

 ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಗ್ರಾಮಗಳಾದ  ಎಸ್.ಎಮ್. ದೊಡ್ಡಿ, ಮಳೂರು ಪಟ್ಟಣ್ಣ, ಸುಳ್ಳೇರಿ, ಕುಕ್ಕೂರು, ಕುಕ್ಕೂರುದೊಡ್ಡಿ, ಮಾರ್ಚನಹಳ್ಳಿ, ತಿಟ್ಟಮಾರನಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ  ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಪರವಾಗಿ  ಮತಯಾಚನೆ ಮಾಡಿದರು.

 ಈ ಸಂದರ್ಭದಲ್ಲಿ ಮಾತನಾಡಿದ ಸಾರಿಗೆ ಮತ್ತು ಮುಜರಾಯಿ ಸಚಿವರಾದ  ರಾಮಲಿಂಗಾರೆಡ್ಡಿ ರವರು ಕಾಂಗ್ರೆಸ್ ಸರ್ಕಾರದ  ಅನೇಕ ಜನಪ್ರಿಯ ಯೋಜನೆಗಳನ್ನು ಮತದಾರರು ಸದುಪಯೋಗಪಡಿಸಿಕೊಂಡಿದ್ದಾರೆ ಹಾಗೂ ರಾಮನಗರ ಜಿಲ್ಲೆ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಮುಖ್ಯಮಂತ್ರಿಗಳಾದ  ಡಿ.ಕೆ ಶಿವಕುಮಾರ್ ಅವರು ಅನೇಕ ಯೋಜನೆಗಳನ್ನು ಜಾರಿಗೆ ತರಲು ಅತ್ಯಂತ ಪ್ರಾಮಾಣಿಕತೆಯಿಂದ ಶ್ರಮಿಸುತ್ತಿದ್ದಾರೆ, 

 ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ರಾಜ್ಯ ಸರ್ಕಾರದಿಂದ ಅನುದಾನವನ್ನು ಬಿಡುಗಡೆ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಸಹಕರಿಸಿದ್ದಾರೆ, 

ಕೇಂದ್ರ ಬಿಜೆಪಿ ಸರ್ಕಾರ ದೇಶದ ಜನರ ಮೇಲೆ ಹೆಚ್ಚಿನ ಸಾಲವನ್ನು ಹೊರಿಸಿದೆ ಯುವಕರಿಗೆ ಉದ್ಯೋಗ ನೀಡುತ್ತಿಲ್ಲ ಬಿಜೆಪಿ ದುರಾಡಳಿತದಿಂದ  ನಿರುದ್ಯೋಗ ಹೆಚ್ಚಾಗುತ್ತಿದೆ ಬಿಜೆಪಿ ಅಧಿಕಾರದಲ್ಲಿ ಮುಂದುವರೆದರೆ ದೇಶವು ಸಾಲದ ಸುಳಿಯಲ್ಲಿ ಸಿಲುಕಿ ಜನರು ಸಂಕಷ್ಟಕ್ಕೆ ಈಡಾಗುತ್ತಾರೆ,

  ಮತದಾರರು ಈ ಬಾರಿ ಸೂಕ್ತ ನಿರ್ಧಾರ ಕೈಗೊಂಡು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು

 ಕಾಂಗ್ರೆಸ್ ಪಕ್ಷ ಯಾವಾಗಲೂ ಜನರ ಪರ ಇರುವಂತಹ ಪಕ್ಷ  ಅದರಲ್ಲೂ ವಿಶೇಷವಾಗಿ ಮಾಜಿ ಸಚಿವರು ಹಾಗೂ ಮಾಜಿ ಶಾಸಕರಾದ  ಸಿ.ಪಿ ಯೋಗೇಶ್ವರ್ ಅವರು ಸ್ಥಳೀಯ ಮಟ್ಟದಲ್ಲಿ ಅನೇಕ ಅಭಿವೃದ್ಧಿಗಳನ್ನ ಮಾಡಿ ನೀರಾವರಿ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿಯನ್ನು ವಹಿಸಿದ್ದಾರೆ ಈ ಜಿಲ್ಲೆಯ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಹೆಚ್ಚಿನ ಅನುದಾನವನ್ನು ಸಹ ನೀಡಿದೆ ಆದ್ದರಿಂದ ನಿಮ್ಮ ಮತವನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ನೀಡಬೇಕೆಂದು ಸ್ಥಳೀಯ ಮತದಾರರಲ್ಲಿ ಮನವಿ ಮಾಡಿಕೊಂಡರು,

 ಕಾಂಗ್ರೆಸ್ ಪಕ್ಷದ ಮುಖಂಡರ ಸಭೆಯನ್ನು ನಡೆಸಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನ ಮತದಾರರಿಗೆ ತಿಳಿಸಿ ಮತ ಪಡೆಯಲು ಎಲ್ಲರೂ ಹೆಚ್ಚಿನ ಆಸಕ್ತಿ ವಹಿಸಿ ಶ್ರಮಿಸಬೇಕೆಂದು ತಿಳಿಸಿದರು.

Post a Comment

0Comments

Post a Comment (0)