ಎಸ್.ಎಸ್.ಎಲ್.ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆ ವಿನ್ಯಾಸದಲ್ಲಿ ಬದಲಾವಣೆ ಕುರಿತು ಸ್ಪಷ್ಠೀಕರಣ

varthajala
0

2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಮಹತ್ವದ ಬದಲಾವಣೆ ಮಾಡಿರುವುದಾಗಿ ದಿನಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿರುತ್ತದೆ. ಆದರೆ 2024-25ನೇ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಮಂಡಲಿಯು ಯಾವುದೇ ಬದಲಾವಣೆ ಮಾಡಿರುವುದಿಲ್ಲ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಸದರಿ ಸಮಿತಿ ನೀಡುವ ವರದಿಯಂತೆ ಕ್ರಮವಹಿಸಲಾಗುವುದು. ಹಾಗಾಗಿ ಈ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಇಲ್ಲದೆ ಕಳೆದ ಸಾಲಿನಂತೆಯೇ ಮುಂದುವರಿಸಲಾಗಿದ್ದು, ಸದ್ಯದಲ್ಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು. ಈ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೆÇೀಷಕರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರು ಸ್ಪಷ್ಠೀಕರಣ ನೀಡಿದ್ದಾರೆ.

Tags

Post a Comment

0Comments

Post a Comment (0)